ಅ. 15 ರ ದಸರಾ ಹಾಗೂ ಅ. 20 ರ ಈದ್‌ಮಿಲಾದ್ ಹಬ್ಬದ ಪ್ರಯುಕ್ತ ಸೌಹಾರ್ದ ಸಮನ್ವಯ ಸಭೆ

ದಾವಣಗೆರೆ: ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಸಾಮೂಹಿಕ ಮೆರವಣಿಗೆಗೆ ಮಾಡದಂತೆ ದಸರಾ ಹಾಗೂ ಈದ್‌ಮಿಲಾದ್ ಹಬ್ಬಗಳ ಆಚರಣೆ ಮಾಡಲು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.

ದಸರಾ, ಈದ್‌ಮಿಲಾದ್ ಹಬ್ಬಗಳ ಆಚರಣೆ ನಿಮಿತ್ತ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ನಾಗರಿಕ ಸೌಹಾರ್ದ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೋವಿಡ್ ಸೋಂಕು ಕಳೆದೆರಡು ವರ್ಷಗಳಿಂದ ವಿಜೃಂಭಣೆಯ ಆಚರಣೆಗಳಿಗೆ ತಡೆಹಾಕಿದ್ದು, ಎಲ್ಲರ ಆರೋಗ್ಯ ದೃಷ್ಟಿಯಿಂದ, ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವ ಅನಿವಾರ್ಯವಿದೆ. ಆದಾಗ್ಯೂ ತಜ್ಞರ ಎಚ್ಚರಿಕೆ ಮೇರೆಗೆ ಮುಂಜಾಗ್ರತೆ ವಹಿಸುವುದು ಅಗತ್ಯವಾಗಿದೆ ಎಂದರು.

ಅ. 15 ರವರೆಗಿನ ದಸರಾ ಹಾಗೂ ಅ. 20 ರಂದು ಈದ್‌ಮಿಲಾದ್ ಎರಡೂ ಹಬ್ಬಗಳ ಆಚರಣೆಯನ್ನು ಸರ್ಕಾರದ ಮಾರ್ಗಸೂಚಿಯಂತೆ ಆಚರಿಸೋಣ, ಹಬ್ಬಗಳ ಸಂದರ್ಭದಲ್ಲಿ ಯಾವುದೇ ಬಗೆಯ ಸಾಮೂಹಿಕ ಮೆರವಣಿಗೆಗೆ ಅವಕಾಶ ಇರುವುದಿಲ್ಲ ಇದಕ್ಕೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಬೀಳಗಿ ಮನವಿ ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಮಾತನಾಡಿ, ಮುಂದಿನ ದಿನಗಳಲ್ಲಿ ಮಾರಕ ರೋಗ ನಿಯಂತ್ರಣಗೊಂಡಲ್ಲಿ, ಎಲ್ಲರೂ ವಿಜೃಂಭಣೆಯಿಂದ ಮೆರವಣಿಗೆ ಸಹಿತ ಆಚರಿಸಬಹುದು ಎಂದು ಹೇಳಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಹಿಂದೂ, ಹಾಗೂ ಮುಸ್ಲಿಂ ಸಮಾಜದ ಮುಖಂಡರು ಈ ಸಂದರ್ಭದಲ್ಲಿ ಮಾತನಾಡಿ ಸರ್ಕಾರದ ಮಾರ್ಗಸೂಚಿಯಂತೆ ಹಬ್ಬಗಳನ್ನು ಆಚರಿಸುವ ಮೂಲಕ ನಾವು ಸಹಕಾರ ನೀಡುತ್ತೇವೆ ಎಂದು ಹೇಳಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರಾಜೀವ್ ಸೇರಿದಂತೆ ಎಲ್ಲ ಡಿವೈಎಸ್‌ಪಿಗಳು, ಪೊಲೀಸ್ ಇಲಾಖೆ ವಿವಿಧ ಅಧಿಕಾರಿಗಳು, ಹಿಂದೂ ಹಾಗೂ ಮುಸ್ಲಿಂ ಸಮಾಜದ ಹಲವು ಮುಖಂಡರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!