ದಸರಾ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆಗೆ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಇಲ್ಲಿದೆ ನೋಡಿ…

ದಾವಣಗೆರೆ: ದಸರಾ, ಈದ್‌ಮಿಲಾದ್ ಹಬ್ಬಗಳ ಆಚರಣೆಗೆ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಅದನ್ನು ಉಭಯ ಧರ್ಮಿಯರು ಪಾಲನೆ ಮಾಡುವ ಅಗತ್ಯವಿದೆ ಎಂದು ಜಿಲ್ಲಾಡಳಿತ ಭವನದಲ್ಲಿ ಕರೆದಿದ್ದ ಸೌಹಾರ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.

ಇದೇ ವೇಳೆ ಡಿವೈಎಸ್‌ಪಿ ಬಸವರಾಜ್ ಅವರು ದಸರಾ ಹಾಗೂ ಈದ್‌ಮಿಲಾದ್ ಹಬ್ಬ ಆಚರಣೆ ಸಂಬಂಧ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಈ ಸಂದರ್ಭದಲ್ಲಿ ತಿಳಿಸಿದರು.

ಹಾಗಿದ್ದರೆ ಏನೇನಿದೆ ಮಾರ್ಗಸೂಚಿಯಲ್ಲಿ ನೋಡೋಣ ಬನ್ನಿ…

ದಸರಾ:

*ದಸರಾ ಹಬ್ಬಕ್ಕೆ ಮಾರ್ಗಸೂಚಿ : ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಅ.7 ರಿಂದ ಅ.15 ಶುಕ್ರವಾರದವರೆಗೆ ಒಟ್ಟು 9 ದಿನಗಳ ಕಾಲ ಆಚರಿಸುವ ದಸರಾ ಹಬ್ಬವನ್ನು ಸರಳವಾಗಿ ಹಾಗೂ ಭಕ್ತಿಪೂರ್ವಕವಾಗಿ ಆಚರಿಸಲು ಸೂಚಿಸಿರುವ ರಾಜ್ಯ ಸರ್ಕಾರ ಸಾಮೂಹಿಕ ಮೆರವಣಿಗೆ ನಡೆಸದಂತೆ ನಿಷೇಧಿಸಿದೆ.

*ಮೈಸೂರು ಹೊರತಾಗಿ ರಾಜ್ಯದ ಇತರೆಡೆ ನಡೆಸುವ ದಸರಾ ಕಾರ್ಯಕ್ರಮಗಳಲ್ಲಿ 400 ಕ್ಕಿಂತ ಹೆಚ್ಚು ಜನರು ಒಮ್ಮೆಲೆ ಸೇರುವಂತಿಲ್ಲ ಹಾಗೂ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು. ಕೋವಿಡ್-19 ಸೋಂಕು ತಡೆಗಟ್ಟಲು ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು. ಅಲ್ಲದೇ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಸ್ಥಳೀಯ ಸಂಸ್ಥೆ ಅಥವಾ ಪ್ರಾಧಿಕಾರಗಳಿಂದ ಹೊರಡಿಸಲಾಗಿರುವ ಎಲ್ಲಾ ಆದೇಶ ಅಥವಾ ನಿರ್ದೇಶನ ಹಾಗೂ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.

*ಹಬ್ಬ ಹರಿದಿನಗಳಲ್ಲಿ ಸಮಾಜದಲ್ಲಿ ಶಾಂತಿ ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗದೆ ಪೂರಕವಾಗಿರುವ ದಸರಾ ಹಬ್ಬವನ್ನು ಅದೇ ರೀತಿಯಿಂದಲೇ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಕಾಪಾಡುವುದು. ರಾಜ್ಯದ್ಯಂತ ಆಚರಿಸಲಾಗುವ ನಾಡಹಬ್ಬ ದಸರಾ ತಯಾರಿ ಮತ್ತು ಚಟುವಟಿಕೆಗಳ ಕುರಿತು ಸಂಬಂಧಿಸಿದ ಪ್ರಾಧಿಕಾರಗಳು ಆಗಿದಾಂಗೆ ಅಗತ್ಯ ಮುಂಜಾಗ್ರತ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸರ್ಕಾರ ಸೂಚನೆ ನೀಡಿದೆ.

*ಈದ್‌ಮಿಲಾದ್ ಹಬ್ಬ ಆಚರಣೆ ಮಾರ್ಗಸೂಚಿ : ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಈ ವರ್ಷದ ಈದ್‌ಮಿಲಾದ್ ಹಬ್ಬವನ್ನು ಸರಳ ಮತ್ತು ಭಕ್ತಿಪೂರ್ವಕವಾಗಿ ಆಚರಿಸಬೇಕು.

*ಅ. 20 ರಂದು ಆಚರಿಸಲಾಗುವ ಈದ್‌ಮಿಲಾದ್ ಹಬ್ಬ ಆಚರಣೆಯಲ್ಲಿ ಸಾಮೂಹಿಕ ಮೆರೆವಣಿಗೆಯನ್ನು ನಿಷೇಧಿಸಲಾಗಿದೆ. ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಮತ್ತು ರಾತ್ರಿಯ ಪ್ರವಚನ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ, ಸಭೆ, ಸಮಾರಂಭಗಳಲ್ಲಿ 100 ಕ್ಕಿಂತ ಹೆಚ್ಚು ಜನ ಒಮ್ಮೆಲೆ ಸೇರುವಂತಿಲ್ಲ, ಸಾಮೂಹಿಕ ಅಂತರ ಕಡ್ಡಾಯವಾಗಿ ಪಾಲಿಸಬೇಕು.

*ಮಸೀದಿಗಳಲ್ಲಿ ಮತ್ತು ದರ್ಗಾಗಳಲ್ಲಿ ಸಾಮಾಜಿಕ ಅಂತರ ಹಾಗೂ ಕೋವಿಡ್ ಶಿಷ್ಠಚಾರದೊಂದಿಗೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ಜೊತೆಗೆ ದೈಹಿಕ ಅಂತರ ಕಾಪಾಡಿಕೊಳ್ಳುವುದರ ಮೂಲಕ ಹಬ್ಬ ಆಚರಿಸಬೇಕು. ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕಗಳು, ಡಿಜಿಟಲ್ ಸೌಂಡ್ (ಡಿಜೆ) ಬಳಕೆ ನಿಷೇಧಿಸಲಾಗಿದೆ.

*ಪ್ರಾರ್ಥನಾ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು, ತಪ್ಪಿದಲ್ಲಿ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. 60 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡಬೇಕು. ಕೋವಿಡ್ ಸಮುಚಿತ ವರ್ತನೆಗಳೊಂದಿಗೆ ಸಾಮೂಹಿಕ ಪ್ರಾರ್ಥನೆ ನಡೆಸಬೇಕು, ಒಂದು ವೇಳೆ ಹೆಚ್ಚು ಜನರು ಆಗಮಿಸಿದ್ದಲ್ಲಿ, ಎರಡು ಅಥವಾ ಹೆಚ್ಚಿನ ಪಳಿಯಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಬೇಕು.

*ನಮಾಜ್ ನಿರ್ವಹಿಸುವವರ ಮಧ್ಯೆ ಕನಿಷ್ಟ 6 ಅಡಿ ಅಂತರ ಕಾಯ್ದುಕೊಂಡು, ಆಗಾಗ ಸೋಪು, ಸ್ಯಾನಿಟೈಸರ್ ಬಳಸಬೇಕು, ಮಸೀದಿ ಪ್ರವೇಶಿಸುವ ಮೊದಲು ದೇಹದ ತಾಪಮಾನ ತಪಾಸಣೆ ಮಾಡುವ ವ್ಯವಸ್ಥೆ ಮಾಡಬೇಕು.

Leave a Reply

Your email address will not be published. Required fields are marked *

error: Content is protected !!