ಮಗಳ ಬರ್ತ್‌ಡೈ ಪಾರ್ಟಿಗೆ ವಿವಿ ಲೆಟರ್ ಹೆಡ್‌ನಲ್ಲಿ ಆಹ್ವಾನ ಪ್ರೊ.ಬಿ.ವಿ. ವೀರಭದ್ರಪ್ಪ ಅವರ ಕ್ರಮ ಈಗ ಚರ್ಚೆಯಲ್ಲಿ

ಮಗಳ ಬರ್ತ್‌ಡೈ ಪಾರ್ಟಿಗೆ ವಿವಿ ಲೆಟರ್ ಹೆಡ್‌ನಲ್ಲಿ ಆಹ್ವಾನ ಪ್ರೊ.ಬಿ.ವಿ. ವೀರಭದ್ರಪ್ಪ ಅವರ ಕ್ರಮ ಈಗ ಚರ್ಚೆಯಲ್ಲಿ

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ವಿ.ವೀರಭದ್ರಪ್ಪ ತಮ್ಮ ಮಗಳ ಹುಟ್ಟುಹಬ್ಬದ ಔತಣಕೂಟದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸಲು ಹೊರಡಿಸಿರುವ ಸುತ್ತೋಲೆ ಈಗ ಚರ್ಚೆಗೆ ಗ್ರಾಸವಾಗಿದೆ.

ಮೇ 28ರಂದು ಮಗಳು ಬಿ.ವಿ.ಆಕಾಂಕ್ಷ ಅವರ ಹುಟ್ಟುಹಬ್ಬದ ಔತಣಕೂಟದಲ್ಲಿ ಪಾಲ್ಗೊಳ್ಳುವಂತೆ ವಿಶ್ವವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ಕುಲಪತಿ ಆಹ್ವಾನಿಸಿದ್ದಾರೆ. ಅದಕ್ಕಾಗಿ ವಿಶ್ವವಿದ್ಯಾಲಯದ ಅಧಿಕೃತ ಲೆಟರ್ ಹೆಡ್‌ನಲ್ಲಿ ಸುತ್ತೋಲೆ ಹೊರಡಿಸಿದ್ದಾರೆ. ಅದು ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿದೆ.

ಕುಲಪತಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ವೈಯುಕ್ತಿಕ ಆಹ್ವಾನಕ್ಕೆ ವಿಶ್ವವಿದ್ಯಾಲಯದ ಲೆಟರ್ ಹೆಡ್ ದುರ್ಬಳಕೆ ಮಾಡಿಕೊಂಡಿರುವುದು ಎಷ್ಟು ಸರಿ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

ಕುಲಪತಿಯ ಸುತ್ತೋಲೆ ಹಿನ್ನೆಲೆಯಲ್ಲಿ ಭಾನುವಾರ ಮಧ್ಯಾಹ್ನ ನಡೆದ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಹಲವು ನೌಕರರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!