ದಾವಣಗೆರೆಗೆ ಸಿಎಂ ಬೋಮ್ಮಾಯಿ ದಿಡೀರ್ ಭೇಟಿ. ತವರು ಜಿಲ್ಲೆಯಲ್ಲಿ ನಡೆಸುತ್ತಿರುವ ಉಪ ಚುನಾವಣೆಗೆ ರೂಪಿಸಿದರ ರಣತಂತ್ರ.


ದಾವಣಗೆರೆ: ಮುಖ್ಯಮಂತ್ರಿ ಬಸವರಾಜ್ ಬೋಮ್ಮಾಯಿ ದಾವಣಗೆರೆಗೆ ದಿಡೀರ್ ಭೇಟಿ ನೀಡಿದ್ದಾರೆ. ಸಿ ಎಂ ಬೋಮ್ಮಾಯಿ ತವರು ಜಿಲ್ಲೆ ಹಾವೇರಿಯಲ್ಲಿ ಈಗ ಉಪಚುನಾವಣೆಯ ಕಾವು. ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯುತ್ತಿದೆ. ಹಾನಗಲ್ ಕೇತ್ರ ಸಿಎಂ ಬೋಮ್ಮಾಯಿ ಪ್ರತಿನಿಧಿಸುವ ಜಿಲ್ಲೆಯಲ್ಲಿ ಬರುವುದಿಂದ ಬೋಮ್ಮಾಯಿಗೆ ಈ ಉಪ ಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ.

ಸಿಎಂ ಆದ ನಂತರ ಅವರ ನೇತೃತ್ತದಲ್ಲಿ ಪಕ್ಷ ಎದುರಿಸುತ್ತಿರುವ ಮೊದಲ ಚುನಾವಣೆ ಇದಾಗಿದೆ. ಹೀಗಾಗಿ ಗೆಲ್ಲಲೇ ಬೇಕಾದ ಅನಿವಾರ್ಯತೆ ಸಹ ಇದೆ. ಜೊತೆಗೆ ಮಾಜಿ ಸಿಎಂ ಯಡಿಯೂರಪ್ಪನವರ ಪುತ್ರ ವಿಜಯೇಂದ್ರರನ್ನು ಚುನಾವಣೆ ಉಸ್ತುವಾರಿ ಪಟ್ಟಿಯಲ್ಲಿ ಹೆಸರು ಬಿಟ್ಟು, ನಂತರ ಪಕ್ಷದ ಕಾರ್ಯಕರ್ತರ ಒತ್ತಡಕ್ಕೆ ಮಣಿದು ವಿಜಯೇಂದ್ರ ಹೆಸರು ಸೇರಿಸಲಾಗಿತ್ತು. ಅದು ಸಹ ಹಾನಗಲ್ ಕ್ಷೇತ್ರದ ಉಸ್ತುವಾರಿಗಳ ಪಟ್ಟಿಯಲ್ಲಿ ವಿಜಯೇಂದ್ರ ಹೆಸರು ಇದೆ. ಈ ಎಲ್ಲಾ ವಿಷಯಗಳ ಬಗ್ಗೆ ಚರ್ಚೆ ನಡೆಸಲು ಸಿಎಂ ಏಕಾಏಕಿ ದಾವಣಗೆರೆಗೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ.

ಹಾವೇರಿ ಜಿಲ್ಲೆಯ ಪಕ್ಷದ ಮುಖಂಡರ ಜೊತೆ ಸುದೀರ್ಘ ಚರ್ಚೆ ನಡೆಸಿದ್ದಾರೆ. ಜೊತೆಗೆ ದಿವಂಗತ ಸಿ.ಎಂ ಉದಾಸಿ ಕುಟುಂಬ ಹಾನಗಲ್ ಕ್ಷೇತ್ರದ ಟಿಕೆಟ್ ಮೇಲೆ ಕಣ್ಣಿಟ್ಟಿತ್ತು. ಅದರೆ ಪಕ್ಷ ಉದಾಸಿ ಕುಟುಂಬಕ್ಕೆ ಮಣೆ ಹಾಕಿಲ್ಲ. ಇದು ಸಹ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆ ಪೆಟ್ಟು ಕೊಡಬಹುದು ಎಂಬ ಕಾರಣಕ್ಕೆ ಸ್ಥಳೀಯ ಮುಖಂಡರು ಮತ್ತು ಹಾನಗಲ್ ಕ್ಷೇತ್ರದ ಉಸ್ತುವಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ.

ಹಾನಗಲ್ ಕ್ಷೇತ್ರದ ಟಿಕೆಟ್ ವಿಚಾರಕ್ಕೆ ಇರುವಂತಹ ಸಣ್ಣಪುಟ್ಟ ಗೊಂದಲಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಚರ್ಚೆ ಮಾಡಿ, ಎಲ್ಲರ ಮನೆವೊಲಿಸಿದ್ದಾರೆ ಎಂಬ ಮಾಹಿತಿ ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಇನ್ನು ಇದೇ ವೇಳೆ ದಾವಣಗೆರೆಯಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೋಮ್ಮಾಯಿ ಇದು ದಿಡೀರ್ ಭೇಟಿಯಾಗಲು ಬಂದಿಲ್ಲ, ದಾವಣಗೆರೆಗೆ ಬರಲು ಎರಡು ಉದ್ದೇಶ ಇತ್ತು. ಬೇರೆ ಬೇರೆ ವಿಷಯಗಳ ಕುರಿತು ಚರ್ಚೆ ಮಾಡಬೇಕಿತ್ತು. ಹೀಗಾಗಿ ಅವರನ್ನು ಕರೆಸಿ ಮಾತನಾಡಿದ್ದೇನೆ. ಜಿಲ್ಲೆಯ ಅಭಿವೃದ್ಧಿ ಬಗ್ಗೆ ಶಾಸಕರನ್ನು ಕರೆಸಿ ಚರ್ಚೆ ನಡೆಸಿರುವುದಾಗಿ ಹೇಳಿದ್ದಾರೆ.

ಇನ್ನು ಹಾನಗಲ್ ಚುನಾವಣೆ ಬಗ್ಗೆ ಸುಧೀರ್ಘ ಚರ್ಚೆ ನಡೆಸಿದ್ದೇವೆ, ಜಿಲ್ಲೆಯ ಮುಖಂಡರುಗಳ ಜೊತೆ ಚುನಾವಣೆ ಪ್ರಚಾರ ಮತ್ತು ತಂತ್ರಗಾರಿಕೆ ಬಗ್ಗೆ ಮಾತುಕತೆ ನಡೆಸಿದ್ದಾಗಿ ತಿಳಿಸಿದ್ದಾರೆ.

ಒಟ್ಟಾರೆ ನಾಳೆ ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನ ಅದ್ದರಿಂದ ಬಿಜೆಪಿ ಬಂಡಾಯ ಅಭ್ಯರ್ಥಿ ಆರ್ ಸಿ ಬಳ್ಳಾರಿಯ ನಡೆ ಬಗ್ಗೆ ಎಲ್ಲರ ಕುತೂಹಲ ನೆಟ್ಟಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!