ಕಾಂಗ್ರೆಸ್ ಹೈಕಮಾಂಡ್‍ ನಿಂದ ಶಾಸಕರು, ಮಾಜಿ ಸಚಿವರೊಂದಿಗೆ ಆನ್‍ಲೈನ್ ಸಭೆ: ಕೇಂದ್ರ, ರಾಜ್ಯ ಸರ್ಕಾರಗಳ ನಿರ್ಲಕ್ಷ್ಯದಿಂದ ಸಾವಿನ ಸಂಖ್ಯೆ ಹೆಚ್ಚಳ: ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

Davanagere Congress online meeting

ದಾವಣಗೆರೆ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯದಿಂದಾಗಿ ಸಮರ್ಪಕವಾಗಿ ಆಕ್ಸಿಜನ್, ಲಸಿಕೆ ಮತ್ತು ರೆಮಿಡಿಸಿವೆರ್ ಚುಚ್ಚುಮದ್ದು ಸಿಗದೇ ಇರುವುದರಿಂದ ಕೊರೋನಾ ರೋಗಿಗಳು ಹೆಚ್ಚಾಗುವುದರ ಜೊತೆಗೆ ಸಾವಿನ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ದೂರಿದರು.

ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ರವರು ದಾವಣಗೆರೆ ನಗರದ ಶಾಸಕರು, ಮಾಜಿ ಸಚಿವರೊಂದಿಗೆ ಆನ್‍ಲೈನ್ ಜೂಮ್ ಆ್ಯಪ್ ಮೂಲಕ ಸಂವಾದ ಸಭೆ ನಡೆಸಿದ ವೇಳೆ ಮಲ್ಲಿಕಾರ್ಜುನ್ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯ ಧೋರಣೆಯನ್ನು ಸವಿವರವಾಗಿ ವಿವರಿಸಿದರು.

ಕೊರೋನಾ 2ನೇ ಅಲೆ ಆರಂಭದಲ್ಲಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದರಿಂದ ಇಂದು ಸಮಸ್ಯೆ ಉಂಟಾಗಿದ್ದು, ಈಗಾಲಾದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮರ್ಪಕವಾಗಿ ಲಸಿಕೆ, ಆಕ್ಸಿಜನ್ ಮತ್ತು ರೆಮಿಡಿಸಿವೆರ್ ಚುಚ್ಚುಮದ್ದು ನೀಡಬೇಕು ಎಂದು ಕೇಂದ್ರ ಮಟ್ಟದಲ್ಲಿ ಒತ್ತಡ ಹಾಕಬೇಕೆಂದು ಮನವಿ ಮಾಡಿದರು.

ದಾವಣಗೆರೆ ಜಿಲ್ಲೆಯ ಕೇಂದ್ರ ಸ್ಥಾನದಲ್ಲಿ ಸರ್ಕಾರದಿಂದ ಜಿಲ್ಲಾಸ್ಪತ್ರೆ ಮತ್ತು ಬಾಪೂಜಿ ವಿದ್ಯಾಸಂಸ್ಥೆಯಡಿ 2 ಆಸ್ಪತ್ರೆಗಳಿದ್ದು, ಸುಮಾರು 3 ಸಾವಿರ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆಗೆ ಪೂರಕವಾಗಿ ಜಿಲ್ಲಾಡಳಿತ ಸ್ಪಂದಿಸುತ್ತಿಲ್ಲ ಎಂದು ದೂರಿದರು.

ದಾವಣಗೆರೆ ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೊರೋನಾ ವಾರಿಯಸ್ ್ಗಳಾಗಿ ಕೆಲಸ ಮಾಡುತ್ತಿದ್ದು, ಕೊರೋನಾ ರೋಗಿಗಳಾಗಿ ಹೋಂ ಐಸೋಲೇಷನ್ ಇರುವವರಿಗೆ ಕಿಟ್, ಲಸಿಕೆ ಹಾಕಿಸಿಕೊಳ್ಳುವವರಿಗೆ ನೆರವು ಹಾಗೂ ಅವಶ್ಯ ಇರುವ ಕಡೆಗಳಲ್ಲಿ ಆಹಾರದ ಪೊಟ್ಟಣಗಳನ್ನು ವಿತರಿಸುತ್ತಿದ್ದಾರೆ ಎಂದರು.

ಮಾಜಿ ಸಚಿವರು, ಹಾಲಿ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು ಮಾತನಾಡಿ ಜಿಲ್ಲಾಡಳಿತ ಸಮರ್ಪಕವಾಗಿ ಆಕ್ಸಿಜನ್, ಲಸಿಕೆ ಮತ್ತು ರೆಮಿಡಿಸಿವೆರ್ ಸಮರ್ಪಕವಾಗಿ ಒದಗಿಸಿದರೆ ರೋಗವನ್ನು ಕಡಿಮೆಗೊಳಿಸಬಹುದು ಎಂದು ತಿಳಿಸಿ ಲಸಿಕೆ ಮತ್ತು ರೆಮಿಡಿಸಿವೆರ್ ಉತ್ಪಾದನೆ ಮತ್ತು ಮಾರಾಟವನ್ನು ಮುಕ್ತಗೊಳಸಿದರೆ ಅವಶ್ಯವಿರುವವರಿಗೆ ಅನುಕೂಲವಾಗಲಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಒತ್ತಡ ತರುವಂತೆ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ವಕ್ತಾರ ಡಿ.ಬಸವರಾಜ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ದಾವಣಗೆರೆ ಮಹಾನಗರ ಪಾಲಿಕೆ ವಿಪಕ್ಷ ನಾಯಕ ಎ.ನಾಗರಾಜ್ ಸದಸ್ಯರುಗಳಾದ ಕೆ.ಚಮನ್ ಸಾಬ್, ಜಿ.ಎಸ್.ಮಂಜುನಾಥ್ ಗಡಿಗುಡಾಳ್ ಮತ್ತಿತರರಿದ್ದರು.

Leave a Reply

Your email address will not be published. Required fields are marked *

error: Content is protected !!