ದಾವಣಗೆರೆ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಸಂಸದ ಡಾ.ಜಿ.ಎಂ ಸಿದ್ದೇಶ್ವರ್ ಚಾಲನೆ
ದಾವಣಗೆರೆ: ದಾವಣಗೆರೆ ಜಿಲ್ಲಾ ಸಂಸದರಾದ ಡಾ.ಜಿ.ಎಂ ಸಿದ್ದೇಶ್ವರ್, ಯುವಕರು ಓದುವುದರ ಜೊತೆಗೆ ಕ್ರೀಡೆ, ಸಂಸ್ಕೃತಿ ಹಾಗೂ ಉತ್ತಮ ಸಂಸ್ಕಾರವನ್ನು ಬೆಳೆಸುಕೊಂಡರೆ ಜೀವನದಲ್ಲಿ ಯಶಸ್ಸನ್ನು ಕಾಣಬಹುದು ಎಂದು ದಾವಣಗೆರೆ ಮಟ್ಟದ ದಸರಾ ಕ್ರೀಡಾಕೂಟ ಚಾಲನೆ ನೀಡಿ ಮಾತನಾಡಿದ ಸಂಸದ ಡಾ.ಜಿ.ಎಂ ಸಿದ್ದೇಶ್ವರ್.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಾವಣಗೆರೆ ಇವರ ಸಂಯುಕ್ತ ಆಶ್ರಯಲ್ಲಿ ಆಯೋಜಿಸಲಾಗಿದ್ದ ‘ದಾವಣಗೆರೆ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ 2022-23’ ಉದ್ಘಾಟನಾ ಸಮಾರಂಭವನ್ನು ಗುಂಡು ಎಸೆಯುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಕ್ರೀಡೆ ದೈಹಿಕ ಹಾಗೂ ಮಾನಸಿಕ ವೃದ್ದಿಗೆ ಸಹಾಯಕಾರಿಯಗಿದೆ. ಯುವಕರು ಓದುವುದರ ಜೊತೆಗೆ ಕ್ರೀಡೆ ಹಾಗೂ ಉತ್ತಮ ಸಂಸ್ಕಾರವನ್ನು ಬೆಳೆಸುಕೊಂಡರೆ ಜೀವನದಲ್ಲಿ ಯಶಸ್ಸನ್ನು ಕಾಣಬಹುದು. ಕ್ರೀಡಾಪಟುಗಳು ಸೋಲು ಗೆಲುವಿನ ಬಗ್ಗೆ ಯೋಚಿಸದೆ ಉತ್ತಮ ಸಾಧನೆ ಮಾಡಲು ಗಮನಹರಿಸಬೇಕು ಎಂದರು.
ಇತ್ತೀಚಿಗೆ ನಡೆದ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ನಮ್ಮ ದೇಶ ಭಾಗವಹಿಸಿ ಸುಮಾರು 61 ಪದಕಗಳನ್ನು ಪಡೆದು ಇತಿಹಾಸ ಸೃಷ್ಟಿಸಿದೆ. ದೇಶದ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ, ಅಂತರಾಷ್ಟ್ರ ಮಟ್ಟಕ್ಕೆ ಹೋಗಿ ದೇಶದ ಹಿರಿಮೆಯನ್ನು ಹೆಚ್ಚಿಸುತ್ತಿದ್ದಾರೆ. ನೀವುಗಳು ಸಹ ದಸರಾ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಿ ಜಿಲ್ಲೆಗೆ ಕೀರ್ತಿ ತನ್ನಿ ಎಂದು ಶುಭ ಹಾರೈಸಿದರು.
ಮಾಯಕೊಂಡ ಶಾಸಕ ಹಾಗೂ ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಎನ್.ಲಿಂಗಣ್ಣ ಮಾತನಾಡಿ, ಕ್ರೀಡಾಪಟುಗಳು ಸೌಹಾರ್ದಯುತವಾಗಿ ಕ್ರೀಡಾ ಮನೋಭಾವದಿಂದ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ಎಂತಹ ಸವಾಲನ್ನು ಬೇಕಾದರೂ ಮನೋಧೈರ್ಯದಿಂದ ಎದುರಿಸಬಹುದು. ಆಟದಲ್ಲಿ ಸೋಲು ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮೇಯರ್ ಆರ್ ಜಯಮ್ಮ ಗೋಪಿನಾಯ್ಕ್, ದಾವಣಗೆರೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಸುಚೇತಾ.ಎಂ.ನೆಲವಿಗಿ, ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕುಗಳ ಕ್ರೀಡಾಪಟುಗಳು ಭಾಗವಹಿಸಿದ್ದರು.
ದಾವಣಗೆರೆ ಜಿಲ್ಲಾ ಸಂಸದರಾದ ಡಾ.ಜಿ.ಎಂ ಸಿದ್ದೇಶ್ವರ್, ಯುವಕರು ಓದುವುದರ ಜೊತೆಗೆ ಕ್ರೀಡೆ, ಸಂಸ್ಕೃತಿ ಹಾಗೂ ಉತ್ತಮ ಸಂಸ್ಕಾರವನ್ನು ಬೆಳೆಸುಕೊಂಡರೆ ಜೀವನದಲ್ಲಿ ಯಶಸ್ಸನ್ನು ಕಾಣಬಹುದು ಎಂದು ಹೇಳಿದರು.