ದಾವಣಗೆರೆ ಜಿಲ್ಲೆಯಲ್ಲಿ ಜೂನ್ 17 ರಂದು ಸುರಿದ ಮಳೆ ವಿವರ

ದಾವಣಗೆರೆ: ಜಿಲ್ಲೆಯಲ್ಲಿ ಜೂ.17 ರಂದು 13.74 ಮಿ.ಮೀ ಸರಾಸರಿ ಮಳೆಯಾಗಿದ್ದು ಒಟ್ಟು ರೂ.1.05 ಲಕ್ಷ ರೂ. ಗಳ ನಷ್ಟದ ಅಂದಾಜು ಮಾಡಲಾಗಿದೆ.

  • ಚನ್ನಗಿರಿ ತಾಲ್ಲೂಕಿನಲ್ಲಿ 15.57 ಮಿ.ಮೀ ವಾಸ್ತವ ಮಳೆಯಾಗಿದೆ.
  • ದಾವಣಗೆರೆ ತಾಲ್ಲೂಕಿನಲ್ಲಿ 8.71 ಮಿ.ಮೀ, ಹರಿಹರದಲ್ಲಿ 8.67 ಮಿ.ಮೀ, ಹೊನ್ನಾಳಿ ತಾಲ್ಲೂಕಿನಲ್ಲಿ 26.50 ಮಿ.ಮೀ, ಹಾಗೂ
    ಜಗಳೂರು ತಾಲ್ಲೂಕಿನಲ್ಲಿ 9.26 ಮಿ.ಮೀ ಮಳೆಯಾಗಿದೆ. ಜಿಲ್ಲೆಯಲ್ಲಿ ಸರಾಸರಿ 13.74 ಮಿ.ಮೀ ಮಳೆಯಾಗಿದೆ.
  • ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 1 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು ಅಂದಾಜು ರೂ.0.25 ಲಕ್ಷ ನಷ್ಟ ಸಂಭವಿಸಿರುತ್ತದೆ.
    ಚನ್ನಗಿರಿ ತಾಲ್ಲೂಕಿನಲ್ಲಿ 1 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು ಅಂದಾಜು ರೂ.0.50 ಲಕ್ಷ ಹಾಗೂ 1 ಕಚ್ಚಾ ಮನೆ ಭಾಗಶಃ ಹಾನಿಯಾಗಿದ್ದು ಅಂದಾಜು ರೂ.0.30 ಲಕ್ಷ ನಷ್ಟ ಸಂಭವಿಸಿದ್ದು, ತಾಲ್ಲೂಕಿನಲ್ಲಿ ಒಟ್ಟು ಅಂದಾಜು ರೂ.0.80 ಲಕ್ಷ ನಷ್ಟ ಸಂಭವಿಸಿದೆ.
  • ಜಿಲ್ಲೆಯಲ್ಲಿ ಒಟ್ಟಾರೆ ರೂ.1.05 ಲಕ್ಷ ನಷ್ಟದ ಅಂದಾಜು ಮಾಡಲಾಗಿದ್ದು, ಸರ್ಕಾರದ ಮಾರ್ಗಸೂಚಿಯನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!