ರಾಜಕೀಯ ಸಮಾವೇಶಗಳಿಗೆ ಮಾತ್ರ ಸೀಮಿತವಾದ ದಾವಣಗೆರೆ.! ಬಜೆಟ್ ನಲ್ಲಿ ಜಿಲ್ಲೆಗೆ ಏನೂ ಇಲ್ಲವಾ.!?
ದಾವಣಗೆರೆ: ರಾಜ್ಯ ಸರ್ಕಾರದ ಬಜೆಟ್ನಲ್ಲಿ ದಾವಣಗೆರೆಗೆ ಏನೂ ಇಲ್ಲ, ಎಲ್ಲವೂ ಬೆಂಗಳೂರಿಗೇ ಸೀಮಿತ , ಮಧ್ಯ ಕರ್ನಾಟಕದಲ್ಲಿ ದಾವಣಗೆರೆಯೂ ಕೂಡ ಒಂದು ಕೈಗಾರಿಕಾ ನಗರವಾಗಿತ್ತು ಎಂಬುದನ್ನು ಎಲ್ಲರೂ ಮರೆತಿದ್ದಾರೆ.
ದಶಕದ ಬೇಡಿಕೆಯಾದ ದಾವಣಗೆರೆ – ಚಿತ್ರದುರ್ಗ – ತುಮಕೂರು ನೇರ ರೈಲು ಮಾರ್ಗದ ಭೂ ಖರೀದಿ ಕಾರ್ಯವನು ( ಚಿತ್ರದುರ್ಗ & ಸಿರಾ ಕಡೆ ) ಈ ಬಜೆಟ್ ನಲ್ಲಿ ಇನ್ನಷ್ಟು ಚುರುಕುಗೊಳಿಸಬಹುದಾಗಿತ್ತು , ಜಿಲ್ಲೆಯ ಜನರಿಗೆ ಉದ್ಯೋಗ ಸೃಷ್ಟಿಗೆ ಬೇಕಾದ SEZ , FOODPARK ಯೋಜನೆಗಳು , ಜಿಲ್ಲೆಯಲ್ಲಿ ಜವಳಿ ಪಾರ್ಕ್ ಘೋಷಣೆ ಮಾಡಬಹುದಾಗಿತ್ತು, ದಾವಣಗೆರೆ ಜಿಲ್ಲೆಯಲ್ಲಿ ಒಂದು ಹೊಸದಾದ IT Park , ಸುಸಜಿತ ಜಿಲ್ಲಾ ಕ್ರೀಡಾಂಗಣ ಮತ್ತು ಕ್ರೀಡಾ ಹಾಸ್ಟೆಲ್ಗಳನ್ನು ಮಂಜೂರು ಮಾಡಬಹುದಾಗಿತ್ತು,ಜಿಲ್ಲೆಯ ಜನರಿಗೆ ಉದ್ಯೋಗ ಸೃಷ್ಟಿಗೆ ಬೇಕಾದ ಯೋಜನೆಗಳು, ಜಿಲ್ಲೆಯಲ್ಲಿ ಜವಳಿ ಪಾರ್ಕ್ ನಿಮಾ೯ಣ. ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಬಡಾವಣೆ ನಿರ್ಮಾಣ , ಬೃಹತ್ ಕೈಗಾರಿಕೆ ಘಟಕಗಳ ಆರಂಭಕ್ಕೆ ‘ಲ್ಯಾಂಡ್ ಬ್ಯಾಂಕ್ ಮಂಜೂರು ಮಾಡಬಹುದಾಗಿತ್ತು,
ದಾವಣಗೆರೆ ಜಿಲ್ಲೆಯ ಕೃಷಿ ಉತ್ಪಾದನೆ ಸಂರಕ್ಷಣೆಗಾಗಿ ಫುಡ್ ಪಾರ್ಕ್ ಮಂಜೂರು ಮಾಡಬಹುದಾಗಿತ್ತು, ಪೆಟ್ರೋಲ್ ಡೀಸೆಲ್ ತೆರಿಗೆ ಕೆಡಿಮೆ ಮಾಡಬಹುದಿತ್ತು, ದಾವಣಗೆರೆ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸ್ಥಾಪಿಸಲು ಉಲ್ಲೇಖಿಸಲಾಗಿದೆ…