ಲೋಕಲ್ ಸುದ್ದಿ

davanagere; ಕಾನೂನು ಅರಿವು ನೆರವು

ದಾವಣಗೆರೆ, ಆ. 23: ಆರ್.ಎಲ್ ಕಾನೂನು ಕಾಲೇಜು, ಎಸ್.ಎಸ್ ಕೇರ್ ಟ್ರಸ್ಟ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಗ್ರಾಮ ಪಂಚಾಯಿತಿ ಕಕ್ಕರಗೊಳ್ಳ, ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಆಗಸ್ಟ್ 23ರಂದು ಬೆಳಿಗ್ಗೆ 11 ಗಂಟೆಗೆ ದಾವಣಗೆರೆಯ (davanagere) ಕಕ್ಕರಗೊಳ್ಳದ ಬಿಷಘ್ನೇಶ್ವರ ಸಮುದಾಯ ಭವನದಲ್ಲಿ ಒಂದು ದಿನದ ಕಾನೂನು ಅರಿವು, ನೆರವು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಬಾಪೂಜಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು ಹಾಗೂ ಎಸ್.ಎಸ್.ಕೇರ್ ಟ್ರಸ್ಟ್ ನ ಲೈಫ್ ಟ್ರಸ್ಟಿಗಳಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ಜಿ.ಪಂ ಮಾಜಿ ಸದಸ್ಯರಾದ ಕೆ.ಬಿ ಬಸವನಗೌಡ್ರು ಅಧ್ಯಕ್ಷತೆ ವಹಿಸುವರು.

protest; ಕಟ್ಟಡ ನಿರ್ಮಾಣ ಕಾರ್ಮಿಕರ ಬೇಡಿಕೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ನ್ಯಾಯಾಧೀಶರಾದ  ಮಹಾವೀರ್ ಎಂ ಕರಣ್ಣನವರ್ ಬೆಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಉಪಕುಲಪತಿಗಳಾದ ಪ್ರೊ.ಡಾ.ಕೆ.ಸಿದ್ದಪ್ಪ, ಆರ್.ಎಲ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಸ್.ಯತೀಶ್ ಭಾಗವಹಿಸುವರು. ಸಂಜೆ 5 ಗಂಟೆಗೆ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಏರ್ಪಡಿಸಲಾಗಿದೆ.

Click to comment

Leave a Reply

Your email address will not be published. Required fields are marked *

Most Popular

To Top