ಡಾII ಪ್ರಭಾ ಮಲ್ಲಿಕಾರ್ಜುನ್ ಗೆ ಒಲಿದ ದಾವಣಗೆರೆ ಲೋಕಸಭಾ ಟಿಕೆಟ್, ಕಿರುಪರಿಚಯ ನುಡಿದ ಹರೀಶ್ ಬಸಾಪುರ

ದಾವಣಗೆರೆ: ದಾವಣಗೆರೆ ತಾಲೂಕಿನ ಕಕ್ಕರಗೊಳ್ಳ ಗ್ರಾಮದ ಕೃಷಿ ಹಿನ್ನೆಲೆಯ ಗೌಡ್ರು ಕುಟುಂಬದಲ್ಲಿ ದಿನಾಂಕ 15-03-1976 ರಂದು ಶ್ರೀಮತಿ ಗಿರಿಜಮ್ಮ ಮತ್ತು ದಿವಂಗತ ಕೆ.ಜಿ ಪರಮೇಶ್ವರಪ್ಪರವರ ಪುತ್ರಿಯಾಗಿ ಜನಿಸಿ, ಹರಿಹರದ ಕುಮಾರ ಪಟ್ಟಣಂ ನ ಫಾಲಿ ಫೈಬರ್ ಸಿಬಿಎಸ್‌ಇ ಶಾಲೆಯಲ್ಲಿ ತಮ್ಮ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಶಿಕ್ಷಣವನ್ನು ಮುಗಿಸಿ ನಂತರ ದಾವಣಗೆರೆಯ ಬಾಪೂಜಿ ಡೆಂಟಲ್ ಕಾಲೇಜಿನಲ್ಲಿ ದಂತ ವಿಜ್ಞಾನದಲ್ಲಿ ವೈದ್ಯಕೀಯ ಪದವಿಯನ್ನು ಪಡೆದಿರುತ್ತಾರೆ.

ಮಾನ್ಯ ಸಚಿವರಾದ ಶ್ರೀ ಎಸ್.ಎಸ್ ಮಲ್ಲಿಕಾರ್ಜುನ್ ಅವರೊಂದಿಗೆ ವಿವಾಹದ ನಂತರ ಅವರ ಕುಟುಂಬದ ಸಾಮಾಜಿಕ, ವ್ಯಾಪಾರ ಮತ್ತು ರಾಜಕೀಯಕ್ಕೆ ಸಂಬಂಧಪಟ್ಟ ಕೆಲಸಗಳಲ್ಲಿ ಹೆಗಲಿಗೆ ಹೆಗಲು ಕೊಟ್ಟು ಬೆಂಬಲವಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಾ ಬಂದಿರುತ್ತಾರೆ.

ಡಾ II ಪ್ರಭಾ ಮಲ್ಲಿಕಾರ್ಜುನ್ ರವರು ದಾವಣಗೆರೆಯ ಪ್ರತಿಷ್ಠಿತ ಬಾಪೂಜಿ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾಗಿಯೂ ತಮ್ಮ ಜವಾಬ್ದಾರಿಯನ್ನು ನಿರ್ವಹಿಸುತ್ತಾ ಬಂದಿರುತ್ತಾರೆ.

ಇವರು ಸಾಮಾಜಿಕ ಕಳಕಳಿಯ ದೃಷ್ಟಿಯಿಂದ ಎಸ್.ಎಸ್ ಕೇರ್ ಟ್ರಸ್ಟ್ ನ ಲೈಫ್ ಟ್ರಷ್ಟಿಯಾಗಿ ಹಲವಾರು ಸಾಮಾಜಿಕ ಕಳಕಳಿಯ ಕಾರ್ಯಗಳನ್ನು ಮಾಡುತ್ತಾ ಬಂದಿರುತ್ತಾರೆ.

ಎಸ್.ಎಸ್ ಕೇರ್ ಟ್ರಸ್ಟ್ ಮೂಲಕ ಬಡವರಿಗೆ ಉಚಿತವಾಗಿ ಡಯಾಲಿಸಿಸ್ ಸೇವೆ ನೀಡುತ್ತಿದ್ದಾರೆ.

ಸಾಮಾಜಿಕ ಆರೋಗ್ಯದ ದೃಷ್ಟಿಯಿಂದ ತಮ್ಮ ಟ್ರಸ್ಟ ವತಿಯಿಂದ ನವಜಾತ ಶಿಶುಗಳು ಮತ್ತು ಮಕ್ಕಳ ಆರೋಗ್ಯ, ತಾಯಂದಿರು ಮತ್ತು ಮಕ್ಕಳಲ್ಲಿ ಸುಧಾರಿತ ಘೋಷಣೆ, ಆರೋಗ್ಯ ವ್ಯವಸ್ಥೆಗಳನ್ನು ಬಲಪಡಿಸುವುದು, ಆರೋಗ್ಯ, ಶಿಕ್ಷಣ ಮತ್ತು ವಿದ್ಯಾರ್ಥಿ ವೇತನದ ಅವಕಾಶಗಳನ್ನು ಒದಗಿಸುವ ಹಾಗೂ ಅಂಗನವಾಡಿಗಳಲ್ಲಿ ರಕ್ತಹೀನತೆ ಮತ್ತು ಆಪೌಷ್ಟಿಕತೆಯ ಕಾರ್ಯಕ್ರಮಗಳೊಂದಿಗೆ ಮಹಿಳೆಯರಿಗೆ ಉಚಿತ ರೋಗ ನಿರ್ಣಯ ಮತ್ತು ಚಿಕಿತ್ಸಾ ಶಿಬಿರಗಳನ್ನು ಆಯೋಜನೆ ಮಾಡುತ್ತಾ ಬಂದಿರುತ್ತಾರೆ ಶಾಲಾ ಮಕ್ಕಳಿಗೆ. ಉಚಿತ ದಂತ ಜಾಗೃತಿ ಮತ್ತು ಚಿಕಿತ್ಸ
ಶಿಬಿರವನ್ನು ಆಯೋಜನೆ ಮಾಡುವುದು ಟ್ರಸ್ಟ್ ನ ಪ್ರಮುಖ ಕರ್ತವ್ಯ ಮತ್ತು ಅವುಗಳನ್ನು ಡಾ. ಪ್ರಭಾ ಮಲ್ಲಿಕಾರ್ಜುನ್ ತಮ್ಮ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಸುತ್ತಾ ಬಂದಿರುತ್ತಾರೆ.

ಯುವ ಜನತೆಗೆ ರಕ್ತದಾನದ ಬಗ್ಗೆ ಇರುವ ಭಯ ನಿವಾರಣೆ ಹಾಗೂ ರಕ್ತದಾನದಿಂದ ಆಗುವ ಪ್ರಯೋಜನಗಳನ್ನು ತಿಳಿಸುವ ಉದ್ದೇಶದಿಂದ ಪ್ರತಿಜ್ಞಾ ಎಂಬ ಕಾರ್ಯಕ್ರಮದಡಿ, ಕಾಲೇಜುಗಳಲ್ಲಿ ರಕ್ತದಾನದ ಬಗ್ಗೆ ತಿಳುವಳಿಕೆ ನೀಡುವ ಕಾರ್ಯಕ್ರಮಗಳನ್ನು ತಮ್ಮ ಟ್ರಸ್ಟ್ ಮೂಲಕ ಆಯೋಜನೆ ಮಾಡುತ್ತಿದ್ದಾರೆ.

ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಮುಗುಳುನಗೆ ಯೋಜನೆಯಡಿ ಶಾಲಾ ಮಕ್ಕಳಿಗೆ ದಂತ ಪರೀಕ್ಷೆ ಹಾಗೂ ತಿಳುವಳಿಕೆ ಕಾರ್ಯಕ್ರಮ ನಡೆಸುತ್ತಿದ್ದಾರೆ.

ಎಸ್.ಎಸ್ ಕೇರ್ ಟ್ರಸ್ಟ್ ಮೂಲಕ ಮನೆ ಬಾಗಿಲಿಗೆ ಆರೋಗ್ಯ ಸೇವೆ ಕಲ್ಪಿಸುವ ಉದ್ದೇಶದಿಂದ ಸಕಲ ವೈದ್ಯಕೀಯ ಸೌಕರ್ಯ ಹೊಂದಿರುವ ಬಸ್ ಮೂಲಕ, ವೈದ್ಯಕೀಯ ಸೇವೆ ಕಲ್ಪಿಸಲು ಕಷ್ಟ ಇರುವಂತಹ ದೂರ ದೂರದ ಹಳ್ಳಿಗಳಿಗೂ ಸಹ ವೈದ್ಯಕೀಯ ಸೇವೆ ಒದಗಿಸುವ ವಿನೂತನ ಯೋಜನೆ ಪ್ರಾರಂಭಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!