ದಾವಣಗೆರೆ ವಿವಿ ಘಟಿಕೋತ್ಸವ ಪದವಿ ಪ್ರಮಾಣ ಪತ್ರ: ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

WhatsApp Image 2022-01-17 at 6.34.09 PM

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯದ 09 ನೇ ಘಟಿಕೋತ್ಸವದ ಪದವಿ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಜ. 24 ರವರೆಗೆ ವಿಸ್ತರಿಸಲಾಘಿದೆ.
9ನೇ ಘಟಿಕೋತ್ಸವದ ಪದವಿ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಲು ಈ ಮೊದಲು ಜ.10 ಕೊನೆಯ ದಿನಾಂಕವಾಗಿತ್ತು. ಆದರೆ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಘಟಿಕೋತ್ಸವದ ಪದವಿ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಕೆಗೆ ಅವಧಿಯನ್ನು ಜ.24 ರವರೆಗೆ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯಲ್ಲಿನ ಎನ್‍ಸಿಎಲ್ ರದ್ದುಪಡಿಕೊಳ್ಳಲು ಅಂತಿಮ ದಿನಾಂಕವನ್ನು ಜ.20 ಕ್ಕೆ ನಿಗದಿಪಡಿಸಲಾಗಿದೆ. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಉಳಿದಂತೆ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ದಾವಣಗೆರೆ ವಿಶ್ವವಿದ್ಯಾನಿಲಯ ಕುಲಸಚಿವರು(ಪರೀಕ್ಷಾಂಗ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!