ಯು ಜಿ ಸಿ ಮಾರ್ಗಸೂಚಿಯಂತೆ ದಾವಣಗೆರೆ ವಿವಿಯಲ್ಲಿ ಒಂದೇ ಪರೀಕ್ಷೆ ನಡೆಸಿ: ಎ ಐ ಡಿ ಎಸ್ ಓ ಅಗ್ರಹ

Davanagere vv exam

ದಾವಣಗೆರೆ: ರಾಜ್ಯ ಸರ್ಕಾರದ ಹಾಗೂ ಯುಜಿಸಿ ಮಾರ್ಗಸೂಚಿಯ ಅನುಸಾರ ದಾವಣಗೆರೆ ವಿಶ್ವವಿದ್ಯಾಲಯವು ಒಂದೇ ಪರೀಕ್ಷೆಯನ್ನು ನಡೆಸಬೇಕೆಂದು ಒತ್ತಾಯಿಸಿ ಎಐಡಿಎಸ್‌ಓ ಜಿಲ್ಲಾ ಸಮಿತಿ ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಹೋರಾಟ ಸಮಿತಿ ವತಿಯಿಂದ ಶುಕ್ರವಾರ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಕಿರಣ್, ರಾಜ್ಯದ ಇತರೆ ವಿಶ್ವವಿದ್ಯಾಲಯಗಳು ರಾಜ್ಯ ಸರ್ಕಾರದ ಆದೇಶದ ಅನ್ವಯ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಒಂದೇ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಿದೆ. ಅದರಂತೆ ದಾವಣಗೆರೆ ವಿಶ್ವವಿದ್ಯಾಲಯ ಈ ಕೂಡಲೇ ಪ್ರಥಮ ಹಾಗೂ ದ್ವಿತೀಯ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಒಂದೇ ಪರೀಕ್ಷೆಗೆ ಅಧಿಸೂಚನೆ ಹೊರಡಿಸಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಚೇತನ್, ಕಾವ್ಯ, ಭಾರತಿ, ಪುಷ್ಪ ಇದ್ದರು.

Leave a Reply

Your email address will not be published. Required fields are marked *

error: Content is protected !!