ದಾವಣಗೆರೆ ಜಿಲ್ಲಾಧಿಕಾರಿಯಾಗಿ ಡಾ. ವೆಂಕಟೇಶ್ ಎಂ. ವಿ. ನೇಮಕ
ದಾವಣಗೆರೆ: ದಾವಣಗೆರೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2009 ನೇ ಐಎಎಸ್ ಬ್ಯಾಚ್ ಡಾ. ವೆಂಕಟೇಶ್ ಎಂ.ವಿ. ನೇಮಿಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ದಾವಣಗೆರೆ ಜಿಲ್ಲಾಧಿಕಾರಿಯಾಗಿದ್ದ ಶಿವಾನಂದ ಕಾಪಶಿ ಅವರನ್ನು ಯಾವುದೇ ಸ್ಥಳ ತೋರಿಸದೇ ವರ್ಗಾವಣೆ ಮಾಡಲಾಗಿದೆ.
ಪಶುಸಂಗೋಪನೆ ಇಲಾಖೆಯ ಆಯುಕ್ತರಾಗಿದ್ದ ಡಾ. ವೆಂಕಟೇಶ ಅವರನ್ನು ದಾವಣಗೆರೆ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ರಾಜ್ಯಪಾಲರ ಆದೇಶದ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.