ದಾವಣಗೆರೆ ಜಿಲ್ಲೆಯ ನರೇಗಾ ಇಂಜಿನಿಯರ್ ಬೈಕ್ ಲಾರಿ ಅಪಘಾತದಲ್ಲಿ ಸಾವು.!

ಜಗಳೂರು: ಗೆಳೆಯನ ಮದುವೆ ಮುಗಿಸಿಕೊಂಡು ವಾಪಸ್ ಬರುವಾಗ ಬೈಕ್ ಲಾರಿಗೆ ಡಿಕ್ಕಿ ಹೊಡೆದು ನರೇಗಾ ಇಂಜಿನಿಯರಿಂಗ್ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ಘಟನೆ ನಡೆದಿದೆ. ಮಿಥುನ್(34) ಸ್ಥಳದಲ್ಲೇ ಮೃತಪಟ್ಟ ದುರ್ದೈವಿ. ಮಿಥುನ್ ತನ್ನ ಸ್ನೇಹಿತನ ಮದುವೆ ಮುಗಿಸಿಕೊಂಡು ಬರುವಾಗ ಈ ಅಪಘಾತ ಸಂಭವಿಸಿದೆ. ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ತಲೆಗೆ ಬಲವಾದ ಪೆಟ್ಟುಬಿದ್ದಿದೆ. ತೀವ್ರ ರಕ್ತಸ್ರಾವವಾಗಿ ಮಿಥುನ್ ಸ್ಥಳದಲ್ಲೇ ಮೃತಪಟ್ಟದ್ದಾರೆ.
ಮೃತ ಮಿಥುನ್ ದಾವಣಗೆರೆ ತಾಲ್ಲೂಕಿನ ಹೊಸ ನಾಯಕನ ಹಳ್ಳಿ ನಿವಾಸಿಯಾಗಿದ್ದಾರೆ.ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನಲ್ಲಿ ನರೇಗಾದಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ದಾವಣಗೆರೆಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 
                         
                       
                       
                       
                       
                       
                       
                      