ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ನಾಗರಿಕ ಬಂದೂಕು ತರಬೇತಿ ಶಿಬಿರ ಉದ್ಘಾಟನೆ
ದಾವಣಗೆರೆ: ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ದಿನಾಂಕ 11-11-2024 ರಿಂದ 20-11-2024 ರವರೆಗೆ ನಾಗರಿಕ ಬಂದೂಕು ತರಬೇತಿ ಶಿಬಿರವನ್ನು ಹಮ್ಮಿಕೊಂಡಿದ್ದು, ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿಂದು ಹೆಚ್ಚುವರಿ ಪೊಲೀಸ್ ಅಧಿಕ್ಷಕರವರ ಅಧ್ಯಕ್ಷತೆಯಲ್ಲಿ ನಾಗರಿಕ ಬಂದೂಕು ತರಬೇತಿ ಶಿಬಿರ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು
ನಾಗರಿಕ ಬಂದೂಕು ತರಬೇತಿ ಶಿಬಿರ ಉದ್ಘಾಟನೆಯನ್ನು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ವಿಜಯಕುಮಾರ ಎಂ ಸಂತೋಷ್ ರವರು ನೆರವೇರಿಸಿದರು. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಹೆಚ್ಚುವರಿ ಪೊಲೀಸ್ ಅಧೀಕ್ಷಕರು – ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯ ನಾಗರಿಕರಿಗೆ ನಾಗರಿಕ ಬಂದೂಕು ತರಬೇತಿ ಶಿಬಿರವನ್ನು ಹಮ್ಮಿಕೊಂಡಿದ್ದು, ಜಿಲ್ಲೆಯ ನಾಗರಿಕರು ಹಾಗೂ ವಿದ್ಯಾರ್ಥಿಗಳು ಬಂದೂಕು ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳಲು ಅರ್ಜಿಯನ್ನು ಸಲ್ಲಿಸಿ ಶಿಬಿರಕ್ಕೆ ಹಾಜರಾಗಿದ್ದು, ನೀವುಗಳೆಲ್ಲ ಈ ಶಿಬಿರದಲ್ಲಿ ಉತ್ಸಾಯಿಗಳಾಗಿ ಪಾಲ್ಗೊಂಡು, ಉತ್ತಮವಾಗಿ ಬಂದೂಕು ಬಳಕೆ ಬಗ್ಗೆ ತಿಳಿದುಕೊಳ್ಳುವುದು. ಈ ಹತ್ತು ದಿನಗಳು ನಡೆಯುವ ಶಿಬಿರದಲ್ಲಿ ಬಂದೂಕು ತರಬೇತಿ ಜೊತೆ ಇಲಾಖೆಯ ಶಿಸ್ತು ಪಾಲನೆ ಬಗ್ಗೆ ತಿಳಿಸಿಕೊಡಲಾಗುವುದು.
ಬಂದೂಕು ತರಬೇತಿ ಪಡೆದ ನಂತರ ಮುಂದಿನ ದಿನಗಳಲ್ಲಿ ಅದರ ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿ ಹೇಳಿದರು.
ಕಾರ್ಯಕ್ರಮದಲ್ಲಿ ನಗರ ಡಿವೈಎಸ್ಪಿ ರವರಾದ ಶ್ರೀ ಮಲ್ಲೇಶ್ ದೊಡ್ಮನಿ, ಡಿಎಆರ್ ಡಿವೈಎಸ್ಪಿ ಶ್ರೀ ಪಿ ಬಿ ಪ್ರಕಾಶ್ ರವರು, ಆರ್ ಪಿ ಐ ಶ್ರೀ ಸೋಮಶೇಖರ್ ರವರು ಸೇರಿದಂತೆ ಬಂದೂಕು ತರಬೇತುದಾರರು, ಸುಮಾರು 130 ನಾಗರಿಕ ಬಂದೂಕು ಶಿಬಿರಾರ್ಥಿಗಳು ಉಪಸ್ಥಿತರಿದ್ದರು.