ದಾವಣಗೆರೆ ಲೋಕಸಭಾ ಕ್ಷೇತ್ರ, ಮೊದಲ ದಿನ 5 ಅಭ್ಯರ್ಥಿಗಳಿಂದ 6 ನಾಮಪತ್ರಗಳ ಸಲ್ಲಿಕೆ
ದಾವಣಗೆರೆ: ಲೋಕಸಭೆಗೆ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 12 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು ಮೊದಲ ದಿನ 5 ಅಭ್ಯರ್ಥಿಗಳಿಂದ 6 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ. ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಡಾ; ಪ್ರಭಾ ಮಲ್ಲಿಕಾರ್ಜುನ್ ಎರಡು ನಾಮಪತ್ರ, ತಿಪ್ಪೇಸ್ವಾಮಿ ಕೆ.ಎ ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮುನಿಸ್ಟ್), ಉತ್ತಮ ಪ್ರಜಾಕೀಯ ಪಕ್ಷದಿಂದ ಈಶ್ವರ, ಕೆ.ಆರ್.ಎಸ್. ಪಕ್ಷದಿಂದ ರಾಘವೇಂದ್ರ ಜಿ.ಪಿ ಹಾಗೂ ಪಕ್ಷೇತರರಾಗಿ ವಿನಯ್ಕುಮಾರ್ ಜಿ.ಬಿ ಇವರು ನಾಮಪತ್ರ ಸಲ್ಲಿಸಿದ್ದಾರೆ.