ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ ಅವರ ಪರ ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳು ಮತ್ತು ಮುಖಂಡರ ಸಭೆಯನ್ನು ಉದ್ಘಾಟಿಸಿದ ಎಸ್ಸೆಸ್
ದಾವಣಗೆರೆ : ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಪರ ನಾಳೆ ಕಾಂಗ್ರೆಸ್ ಪಕ್ಷದ ಜನ ಪ್ರತಿನಿಧಿಗಳು ಮತ್ತು ಮುಖಂಡರ ಸಭೆಯನ್ನು ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪನವರು ಉದ್ಘಾಟಿಸಿದರು.
ದಾವಣಗೆರೆಯ ಬಂಟರ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ. ಮಂಜಪ್ಪನವರ ಅಧ್ಯಕ್ಷತೆಯಲ್ಲಿ ನಡೆಯುತ್ತಿತುವ ಈ ಸಭೆಯಲ್ಲಿ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ್, ಪಕ್ಷದ ಅಭ್ಯರ್ಥಿಯಾದ ಡಾ.ಪ್ರಭಾ ಮಲ್ಲಿಕಾರ್ಜುನ, ಕೆಪಿಸಿಸಿ ವಕ್ತಾರ ನಿಖೇತ್ ರಾಜು ಮೌರ್ಯ, ಶಾಸಕರಾದ ಶಾಮನೂರು ಶಿವಶಂಕರಪ್ಪ, ಕೆ .ಎಸ್. ಬಸವಂತಪ್ಪ, ಜಗಳೂರು ದೇವೇಂದ್ರಪ್ಪ , ಹರಪನಹಳ್ಳಿ ಲತಾ ಮಲ್ಲಿಕಾರ್ಜುನ್,ಅರಸೀಕೆರೆ ಕೊಟ್ರೇಶ್ , ಚನ್ನಗಿರಿ ಶಿವಗಂಗಾ ಬಸವರಾಜ್, ವಡ್ನಾಳ್ ರಾಜಣ್ಣ, ಹೊನಾಳ್ಳಿ ಡಿ.ಜಿ. ಶಾಂತನಗೌಡ, ಹರಿಹರದ ನಂದಿಗಾವಿ ಶ್ರೀನಿವಾಸ್, ಎಸ್. ರಾಮಪ್ಪ , ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದಾರೆ.