ದಾವಣಗೆರೆ ಲೋಕಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ ದುರ್ಗಾಂಬಿಕಾ ದೇವಿ ದೇವಸ್ಥಾನಕ್ಕೆ ಭೇಟಿ : ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವುದೇ ನಮ್ಮ ಗುರಿ- ಡಾ. ಪ್ರಭಾ ಮಲ್ಲಿಕಾರ್ಜುನ

ದಾವಣಗೆರೆ ಲೋಕಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನರವರು ನಗರದ ದುರ್ಗಾಂಬಿಕಾ ದೇವಿ ದರ್ಶನ ಪಡೆದರು.
ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಚುನಾವಣೆ ಮಾಡಲಾಗುವುದು ,ಅಭಿವೃದ್ಧಿ ಮಾಡುವುದು ನಮ್ಮ ಗುರಿ , ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇನೆ .ಎಲ್ಲಾ ಜಿಲ್ಲಾ ನಾಯಕರೊಂದಿಗೆ ಚರ್ಚೆ ಮಾಡಿ ಪಕ್ಷವನ್ನು ಗೆಲ್ಲಿಸಲು ಶ್ರಮಿಸುತ್ತೇನೆ, ಸಮನ್ವಯತೆಯಿಂದ ಚುನಾವಣೆ ಎದುರಿಸುವೆನು,ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ ಮಾಧ್ಯಮದವರೊಂದಿಗೆ ಹೇಳಿದರು.
ಕುಟುಂಬ ರಾಜಕಾರಣ ಆರೋಪಕ್ಕೆ ಪ್ರತಿಕ್ರಿಯಿಸಿದ ಪ್ರಭಾ ಮಲ್ಲಿಕಾರ್ಜುನರವರು ಪಕ್ಷ ಸಮೀಕ್ಷೆ ನಡೆಸಿ ಗೆಲ್ಲುವ ಅಭ್ಯರ್ಥಿಯನ್ನು ಆಯ್ಕೆ ಮಾಡಿ ನನಗೆ ಟಿಕೆಟ್ ನೀಡಲಾಗಿದೆ, ನಾನು ಎಂದು ಅಭ್ಯರ್ಥಿ ಎಂದು ಎಲ್ಲೂ ಹೇಳಿಕೊಂಡಿರಲಿಲ್ಲ.ಹೈಕಮಾಂಡ್ ಗುರುತಿಸಿ ಟಿಕೆಟ್ ನೀಡಿದೆ.
ಶಾಸಕರು, ಕಾರ್ಯಕರ್ತರ ಅಭಿಪ್ರಾಯ ಮೇರೆಗೆ ಟಿಕೆಟ್ ನೀಡಲಾಗಿದ್ದು, ಎಲ್ಲರೂ ಸೇರಿ ಕಾಂಗ್ರೆಸ್ ಪಕ್ಷವನ್ನ ಗೆಲ್ಲಿಸುವುದೇ ನಮ್ಮ ಗುರಿ, ಎದುರಾಳಿ ಹೆಣ್ಣು ಅಥವಾ ಗಂಡು ಯಾರಾದರೂ ಇರಲಿ ಹೋರಾಟ ಇದ್ದೇ ಇರುತ್ತದೆ ಎಂದರು.