ದಾವಣಗೆರೆ ಮಹಾನಗರ ಪಾಲಿಕೆ ಬಿಜೆಪಿ ಪಕ್ಷದ ಸದಸ್ಯರಾದ ಎಲ್.ಡಿ.ಗೊಣ್ಣೆಪ್ಪ ಕಾಂಗ್ರೆಸ್ ಸೇರ್ಪಡೆ
ದಾವಣಗೆರೆ: ದಾವಣಗೆರೆ ಜಿಲ್ಲಾ ಬಿಜೆಪಿ ಪಕ್ಷದ ಹಿರಿಯ ಮುಖಂಡರು ದಾವಣಗೆರೆ ಮಹಾನಗರ ಪಾಲಿಕೆಯ ಬಿಜೆಪಿ ಪಕ್ಷದ ಸದಸ್ಯರಾದ ಎಲ್.ಡಿ.ಗೊಣ್ಣೆಪ್ಪ ಇಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಮಾಜಿ ಸಚಿವರು ಹಾಲಿ ಶಾಸಕರಾದ ಡಾಕ್ಟರ್ ಶಾಮನೂರ್ ಶಿವಶಂಕರಪ್ಪನವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಎಸ್ ಎಸ್ ಮಲ್ಲಣ್ಣನವರ
ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುತ್ತಾರೆ.
ಒಂದು ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು ದಿನೇಶ್ ಶೆಟ್ಟಿ ಕಾರ್ಯದರ್ಶಿಗಳಾದ ಎಸ್ ಮಲ್ಲಿಕಾರ್ಜುನ್ ಪಾಲಿಕೆರಿಯ ಸದಸ್ಯರಾದ ಎಬಿ ರಹೀಮ್, ಚಮಾನ್ ಸಾಬ್, ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಉಪಾಧ್ಯಕ್ಷರಾದ ಸಾಗರ್. ಎಲ್.ಎಂ.ಹೆಚ್ ರವರು ಅನೇಕ ಕಾಂಗ್ರೆಸ್ ಪಕ್ಷದ ಮುಖಂಡರಿದ್ದರು.