ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ನೂತನ ಸಚಿವರಾದ
ಶ್ರೀ ಎಸ್.ಎಸ್ .ಮಲ್ಲಿಕಾರ್ಜುನ್ ಬೃಹತ್ ರೋಡ್ ಷೋ
ದಾವಣಗೆರೆ: ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಇಲಾಖೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಇದೇ ಜೂನ್ 6 ರಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿಗಳಿಂದ ಬೃಹತ್ ರೋಡ್ ಷೋ ನಡೆಸುವರು.
ಅಂದು ಮದ್ಯಾಹ್ನ 3 ಗಂಟೆಗೆ ದಾವಣಗೆರೆ ವೀರಮದಕರಿ ನಾಯಕ ವೃತ್ತದಿಂದ ರೋಡ್ ಷೋ ಆರಂಭವಾಗಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಧ್ಯಕ್ಷ ಹೆಚ್.ಬಿ.ಮಂಜಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಅಯೂಬ್ ಪೈಲ್ವಾನ್, ಜಿ.ಸಿ.ನಿಂಗಪ್ಪ, ಕೆ.ಜಿ.ಶಿವಕುಮಾರ್, ಬಿ.ಕೆ.ಪರಶುರಾಮ ಮತ್ತು ಮಹಾಪೌರರಾದ ವಿನಾಯಕ ಪೈಲ್ವಾನ್ ಅವರು ತಿಳಿಸಿದ್ದಾರೆ.
ಈ ಮೆರವಣಿಗೆಯೂ ವೀರ ಮದಕರಿ ನಾಯಕ ವೃತ್ತದಿಂದ ಆರಂಭಗೊಂಡು ದುರ್ಗಾಂಭಿಕ ದೇವಸ್ಥಾನದ ಬಳಿ ಶಿವಾಜಿ ವೃತ್ತ, ಹಗೇದಿಬ್ಬ ಸರ್ಕಲ್, ಅಜಾದ್‍ನಗರ ಮುಖ್ಯರಸ್ತೆ, ಅಖ್ತರ್ ರಜ್ಹಾ ಸರ್ಕಲ್, ಬಾಷಾ ನಗರ, ಮಾಗಾನಹಳ್ಳಿ ರಸ್ತೆ, ಅರಳಿಮರ ಸರ್ಕಲ್, ವೆಂಕಟೇಶ್ವರ ಸರ್ಕಲ್‍ಗೆ ಮುಕ್ತಾಯವಾಗಲಿದೆ.
ಈ ಮೆರವಣಿಗೆಯಲ್ಲಿ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು, ಜನಪ್ರತಿನಿಧಿಗಳು ಭಾಗವಹಿಸುವರು.
ಆದ ಕಾರಣ ಆದ ಕಾರಣ ಪಕ್ಷದ ಜನಪ್ರತಿನಿಧಿಗಳು, ಕೆಪಿಸಿಸಿ ಪದಾಧಿಕಾರಿಗಳು, ಜಿಲ್ಲಾ ಸಮಿತಿ ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರು, ಪದಾಧಿಕಾರಿಗಳು, ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಪಾಲಿಕೆ ಸದಸ್ಯರು, ಜಿಲ್ಲಾ, ತಾಲ್ಲೂಕು ಪಂಚಾಯತ್, ಎಪಿಎಂಸಿಯ ಮಾಜಿ ಅಧ್ಯಕ್ಷರು ಮತ್ತು ಸದಸ್ಯರುಗಳು ಮತ್ತು ಗ್ರಾಮ ಪಂಚಾಯಿತಿ ಹಾಲಿ ಮತ್ತು ಮಾಜಿ ಸದಸ್ಯರುಗಳು ವಾರ್ಡ್, ಪಂಚಾಯತ್ ಅಧ್ಯಕ್ಷರು, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎನ್.ಎಸ್.ಯು.ಐ, ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗ, ಅಲ್ಪಸಂಖ್ಯಾತ, ಸೇವಾದಳ, ವಿಕಲಚೇತನ, ಡಾಕ್ಟರ್, ವಕೀಲರ ವಿಭಾಗ ಸೇರಿದಂತೆ ಎಲ್ಲಾ ವಿಭಾಗಗಳ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಕೋರಿದ್ದಾರೆ.
