ದಾವಣಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ದಿನಾಂಕ ಬದಲಾವಣೆ.

ಕನ್ನಡ ಸಾಹಿತ್ಯ ಸಮ್ಮೇಳನ
ದಾವಣಗೆರೆ :ದಾವಣಗೆರೆ ತಾಲ್ಲೂಕು ೯ ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹೊಸ ಬೆಳವನೂರು ಗ್ರಾಮದಲ್ಲಿ ದಿನಾಂಕ :18/02/23 ರ ಶನಿವಾರ ದಂದು ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಅಂದು ಮಹಾಶಿವರಾತ್ರಿ ಹಬ್ಬವಿರುವ ಹಿನ್ನೆಲೆಯಲ್ಲಿ, ದಿನಾಂಕ :27/02/23/ರ ಸೋಮವಾರ ದಂದು ನಡೆಸಬೇಕೆಂದು ದಿನಾಂಕ : 01.02.2023 ರಂದು ಹೊಸ ಬೆಳವನೂರಿನ ಗ್ರಾಮದ ಮುಖಂಡರ & ತಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀಮತಿ ಸುಮತಿ ಜಯಪ್ಪ ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಬಿ.ವಾಮದೇವಪ್ಪ ನವರು ಹಾಗೂ ಪದಾಧಿಕಾರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸರ್ವ ಸಮ್ಮತವಾಗಿ ತೀರ್ಮಾನಿಸಲಾಯಿತು ಎಂದು ತಾಲ್ಲೂಕು ಅಧ್ಯಕ್ಷರಾದ ಸುಮತಿ ಜಯಪ್ಪನವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.