ದಾವಣಗೆರೆ :ಜಿಲ್ಲೆಯಲ್ಲಿ ಜರುಗುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ ಗ್ರೇಡ್-1 ಹುದ್ದೆಗಳು ಹಾಗೂ ವಿವಿಧ ಗ್ರೂಪ್ ಎ, ಬಿ ಮತ್ತು ಸಿ ವೃಂದದ ನೇಮಕಾತಿಗಾಗಿ ಫೆ.25 ರಂದು 15 ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಫೆ.26 ರಂದು 04 ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶಿವಾನಂದ ಕಾಪಶಿ ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರಗಳು ನಡೆಯದಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪರಿಧಿ ವ್ಯಾಪ್ತಿ ಪ್ರದೇಶವನ್ನು ಸಾರ್ವಜನಿಕ ಪ್ರವೇಶಕ್ಕೆ ನಿಷೇಧಿತ ಪ್ರದೇಶವೆಂದು ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚಲು ಆದೇಶಿಸಿದ್ದಾರೆ.
