ದಾವಣಗೆರೆ: ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಶಿವಾನಂದ ಕಾಪಶಿ ಮತ್ತು ಎಸ್ ಪಿ ಡಾ. ಅರುಣ್ ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದಾವಣಗೆರೆ ಜಿಲ್ಲೆಯ ಮಾಯಕೊಂಡ ಕ್ಷೇತ್ರದ ಮಸ್ಟರಿಂಗ್ ಕೇಂದ್ರ, ಮೋತಿ ವೀರಪ್ಪ ಪದವಿ ಪೂರ್ವ ಕಾಲೇಜು ಮತ್ತು ದಾವಣಗೆರೆ ಉತ್ತರ ಮತ್ತು ದಕ್ಷಿಣ ಮಸ್ಟರಿಂಗ್ ಹೈಸ್ಕೂಲ್ ಮೈದಾನಕ್ಕೆ ಹಾಗೂ ಡಿ ಆರ್ ಆರ್ ಶಾಲೆಗಳಿಗೆ ಭೇಟಿ ನೀಡಿ ಮಸ್ಟರಿಂಗ್ ಪರಿಶೀಲನೆ ನಡೆಸಿದರು.
ಈ ವೇಳೆ ಚುನಾವಣಾಧಿಕಾರಿಗಳಾದ ದುರ್ಗಶ್ರೀ, ರೇಣುಕಾ, ಶ್ರೀನಿವಾಸ್ ಇತರರು ಜಿಲ್ಲಾಧಿಕಾರಿಗಳ ಜೊತೆ ಇದ್ದರು.
