ಸ್ಪಂದನಾ ಸಾವಿಗೆ ಡಿಸಿಎಂ ಡಿಕೆಶಿ ಮತ್ತು ಸಚಿವ ಗುಂಡೂರಾವ್ ಸಂತಾಪ

ಬೆಂಗಳೂರು : ಸ್ಪಂದನಾ ನಿಧನಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಕನ್ನಡದ ಖ್ಯಾತ ನಟ ವಿಜಯರಾಘವೇಂದ್ರ ಅವರ ಧರ್ಮಪತ್ನಿ ಸ್ಪಂದನಾ ರಾಘವೇಂದ್ರ ಅವರು ಬ್ಯಾಂಕಾಕ್ ನಲ್ಲಿ ದಿಢೀರ್ ಸಾವಿಗೀಡಾಗಿರುವ ಸಂಗತಿ ತಿಳಿದು ಅಪಾರ ನೋವುಂಟಾಯಿತು. ಇತ್ತಿಚಿಗಷ್ಷೇ ಅವರು ನನ್ನನ್ನು ಭೇಟಿಯಾಗಿ ಶುಭ ಹಾರೈಸಿದ್ದರು. ಸ್ಪಂದನಾ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೆನೆ. ಅವರ ಕುಟುಂಬ ಹಾಗೂ ಸ್ನೇಹಿತ ವರ್ಗಕ್ಕೆ ನನ್ನ ಸಾಂತ್ವಾನಗಳು ಎಂದು ಡಿಕೆಶಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
ನಿಧನದ ಸುದ್ದಿ ಕೇಳಿ ಆಘಾತವಾಯಿತು ; ಸಚಿವ ದಿನೇಶ್ ಗುಂಡೂರಾವ್ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ ಅವರು ಸಂತಾಪ ನಟ ವಿಜಯರಾಘವೇಂದ್ರ ರವರ ಧರ್ಮಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನರಾದ ಸುದ್ದಿ ಕೇಳಿ ಆಘಾತವಾಗಿದೆ. ಅತೀ ಸಣ್ಣ ವಯಸ್ಸಿಗೆ ಆಗುವ ಹೃದಯಾಘಾತದ ದುರ್ಘಟನೆಗಳು ನನ್ನ ಮನಸ್ಸನ್ನು ವಿಚಲಿತ ಗೊಳಿಸಿವೆ. ಸ್ಪಂದನಾರವರ ಸಾವು ಅನಿರೀಕ್ಷಿತ. ವಿಜಯ ರಾಘವೇಂದ್ರ ಕುಟುಂಬದ ಶೋಕದಲ್ಲಿ ನಾನು ಭಾಗಿ ಎಂದು ಟ್ಟೀಟ್ ಮಾಡಿದ್ದಾರೆ.