ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿ ಹಾಗೂ ರಾಗಿ ವಶಕ್ಕೆ ಪಡೆದ ಡಿ ಸಿ ಐ ಬಿ ಪೊಲೀಸ್

ದಾವಣಗೆರೆ: ಆಜಾದ್ ನಗರದ ಮನೆಯೊಂದರಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಪಡಿತರ ಅಕ್ಕಿ ಮತ್ತು ರಾಗಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಆಜಾದ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಅಲ್ಲಿರುವ ಮನೆಯೊಂದರಲ್ಲಿ 679 ಕೆಜಿ ಪಡಿತರ ಅಕ್ಕಿ ಮತ್ತು 809 ಕೆಜಿ ರಾಗಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಡಿಸಿಆರ್ ಬಿ ಘಟಕದ ಪೊಲೀಸ್ ಉಪಾಧೀಕ್ಷ ಬಿ.ಎಸ್ ಬಸವರಾಜ್ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿತು.
ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.