ಏಳು ಸಾವಿರ ಮೋಹಕ್ಕೆ ಡಿಡಿಪಿಐ ಹಾಗೂ ಎಸ್ ಡಿ ಎ ಲೋಕಾಯುಕ್ತ ಬಲೆಗೆ
ದಾವಣಗೆರೆ: ನಿವೃತ್ತ ಶಿಕ್ಷಕಕನ ಫೈಲ್ ಕ್ಲಿಯರ್ ಮಾಡಲು ಲಂಚದ ಹಣ ಸ್ವೀಕರಿರುವ ವೇಳೆ ಡಿಡಿಪಿಐ ಹಾಗೂ ಕೇಸ್ ವರ್ಕರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿ ಜಿಲ್ಲೆಯ ರಟ್ಟೀಹಳ್ಳಿಯ ಸರ್ಕಾರಿ ಉರ್ದು ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡಿರುವ ಮಹಮ್ಮದ್ ಗೌಸ್ ಎಂಬ ಶಿಕ್ಷಕ ತಮ್ಮ ನಿವೃತ್ತಿ ವೇತನ ಸೌಲಭ್ಯ ಪಡೆಯಲು ಅಗತ್ಯ ದಾಖಲಾತಿಗಳನ್ನು ನೀಡಿ ಅದನ್ನು ಸಂಬಂಧಪಟ್ಟ ಇಲಾಖೆಗೆ ಕಳುಹಿಸಲು ಕೋರಿದ್ದರು
ಅದಕ್ಕಾಗಿ ಡಿಡಿಪಿಐ 7 ಸಾವಿರ ರುಪಾಯಿ ಲಂಚ ಕೇಳಿದ್ದರು.
ಏಳು ಸಾವಿರ ಲಂಚದ ಹಣ ಸ್ವೀಕರಿಸುತ್ತಿದ್ದಾಗ ಹಾವೇರಿಯಲ್ಲಿ ಲೋಕಾಯುಕ್ತ ಪೋಲೀಸರು ಟ್ರ್ಯಾಪ್ ಮಾಡಿದ್ದಾರೆ.
ನಿವೃತ್ತ ಶಿಕ್ಷಕರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಡಿಡಿಪಿಐ ಅಂದಾನಪ್ಪ ಒಡಿಗೇರಿ ಮತ್ತು ದ್ವಿತೀಯ ದರ್ಜೆ ಸಹಾಯಕ ದತ್ತಾತ್ರೇಯ ಕುಂಟೆ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳಾಗಿದ್ದಾರೆ.
ಇಬ್ಬರನ್ನೂ ವಶಕ್ಕೆ ಪಡೆಯಲಾಗಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದಾಳಿಯಲ್ಲಿ ಲೋಕಾಯುಕ್ತ ಪೋಲಿಸ್ ಚಂದ್ರಶೇಖರ್ ಹಾಗೂ ಮಂಜುನಾಥ್ ಮತ್ತು ಸಿಬ್ಬಂದಿಗಳ ನೇತೃತ್ವದಲ್ಲಿ ಕಾರ್ಯಾಚಾರಣೆ ಮಾಡಲಾಗಿದೆ.