ಪಕ್ಷಾಂತರ ಪರ್ವ: ‘ಕೈ’ ಹಿಡಿದ ಕರಾವಳಿಯ ಮಾಜಿ ಶಾಸಕರು

Defection festival: Former MLAs from the coast holding 'hands'

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದ ಬಿಜೆಪಿ ಮುಖಂಡ ಮಾಜಿ ಶಾಸಕ ವಿ ಎಸ್ ಪಾಟೀಲ್ ಹಾಗೂ ಶ್ರೀನಿವಾಸ್ ವಿ ಭಟ್ ಅವರು ತಮ್ಮ ಬೆಂಬಲಿಗರ ಜತೆ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಹಿರಿಯ ಮುಖಂಡ ಆರ್ ವಿ ದೇಶಪಾಂಡೆ ಅವರ ಸಮ್ಮುಖದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಈ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಕಾರ್ಯಧ್ಯಕ್ಷರಾದ ಸಲೀಮ್ ಅಹ್ಮದ್, ಉತ್ತರ ಕನ್ನಡ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯಕ್ ಮೊದಲಾದ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!