ದೆಹಲಿ ಮದ್ಯ ನೀತಿ ಹಗರಣ: ಬಿಎಸ್ ಆರ್ ನಾಯಕಿ ಕವಿತಾ ಅರೆಸ್ಟ್
![kavitha](https://garudavoice.com/wp-content/uploads/2024/03/kavitha.jpg)
ದೆಹಲಿ ಮದ್ಯ ಹಗರಣದಲ್ಲಿ ಬಿಆರ್‌ಎಸ್ ನಾಯಕಿ, ತೆಲಂಗಾಣದ ಮಾಜಿ ಮುಖ್ಯಮಂತ್ರಿ ಟಿ ಚಂದ್ರಶೇಖರ ರಾವ್ ಅವರ ಪುತ್ರಿ , ಬಿಎಸ್‌ಆರ್ ನಾಯಕಿ, ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.
ಬಹುಕೋಟಿ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕಿ, ತೆಲಂಗಾಣದ ಮಾಜಿ ಮುಖ್ಯಮಂತ್ರಿ ಟಿ ಚಂದ್ರಶೇಖರ ರಾವ್ ಅವರ ಪುತ್ರಿ, ಬಿಎಸ್‌ಆರ್ ನಾಯಕಿ, ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.
ಹೈದರಾಬಾದ್‌ನಲ್ಲಿರುವ ಕೆ.ಕವಿತಾ ಅವರ ಮನೆಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಿಆರ್‌ಎಸ್ ಪಕ್ಷದ ಎಂಎಲ್‌ಸಿಯೂ ಆಗಿರುವ ಕವಿತಾ ಅವರ ಮೇಲೆ ಗಂಭೀರ ಆರೋಪ ಕೇಳಿ ಬಂದಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕವಿತಾ ಅವರಿಗೆ ಕಳೆದ ಜನವರಿಯಲ್ಲೇ ಇಡಿ ನೋಟಿಸ್ ಜಾರಿ ಮಾಡಿತ್ತು.
ಬಿಆರ್‌ಎಸ್ ನಾಯಕಿ ಕವಿತಾ ಅವರು ಜನವರಿ 16ರಂದೇ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಇಡಿ ಅಧಿಕಾರಿಗಳು ನೀಡಿದ್ದ ಎರಡು ನೋಟಿಸ್‌ಗೆ ಹಾಜರಾಗದ ಹಿನ್ನೆಲೆಯಲ್ಲಿ ಕೆ. ಕವಿತಾ ಅವರ ಮನೆ ಮೇಲೆ ಈ ದಾಳಿ ನಡೆದಿದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಹತ್ವದ ದಾಖಲೆ ಪರಿಶೀಲನೆ ಮಾಡಿದ್ದಾರೆ.
ಮಹತ್ವದ ಸಾಕ್ಷಿಗಳು ಲಭ್ಯವಾದ ಹಿನ್ನೆಲೆಯಲ್ಲಿ ಕೆ. ಕವಿತಾ ಅವರನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆಗಾಗಿ ಕವಿತಾ ಅವರನ್ನು ಹೈದರಾಬಾದ್‌ನಿಂದ ದೆಹಲಿಗೆ ಕರೆದುಕೊಂಡು ಹೋಗಲಾಗುತ್ತಿದೆ ಎಂಬ ಮಾಹಿತಿ ಒದಗಿದೆ.