ವಿಚಾರವಂತ, ವಿದ್ಯಾವಂತರು ಮತದಾನದಿಂದ ದೂರ ಉಳಿದರೆ ಪ್ರಜಾಪ್ರಭುತ್ವ ದುರ್ಬಲ; ಡಾ; ವೆಂಕಟೇಶ್ ಎಂ.ವಿ
ದಾವಣಗೆರೆ : ಪ್ರಜಾಪ್ರಭುತ್ವದಲ್ಲಿ ವಿಚಾರವಂತರು, ವಿದ್ಯಾವಂತರು ಹೆಚ್ಚಾಗಬೇಕು. ಸಾಕ್ಷರತಾ ಮತದಾರರು ಮತದಾನವನ್ನು ಪ್ರಭುದ್ದತೆಯಿಂದ ಚಲಾಯಿಸಲಿದ್ದು ಇವರೇ ಮತದಾನ ಪ್ರಕ್ರಿಯೆಯಿಂದ ದೂರ ಉಳಿದರೆ ಪ್ರಜಾಪ್ರಭುತ್ವವನ್ನು ಬಲಗೊಳಿಸಲು ಕಷ್ಟವಾಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಶನಿವಾರ(6) ರಂದು ನಗರದ ಪೆÇಲೀಸ್ ವಸತಿ ಗೃಹ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದಾವಣಗೆರೆ ಲೋಕಸಸಭಾ ಕ್ಷೇತ್ರಕ್ಕೆ ಮೇ.7ರಂದು ಮತದಾನ ನಡೆಯಲಿದ್ದು ಎಲ್ಲರೂ ಕಡ್ಡಾಯವಾಗಿ ಮತದಾನದಲ್ಲಿ ಪಾಲ್ಗೊಳ್ಳಬೇಕು ಎಂದರು.
ಚುನಾವಣೆಗಳಲ್ಲಿ ಸಾಮಾನ್ಯವಾಗಿ ಗ್ರಾಮಾಂತರ ಪ್ರದೇಶದಲ್ಲಿ ಮತದಾನ ಹೆಚ್ಚಾಗುತ್ತಿದ್ದು, ನಗರ ಪ್ರದೇಶದಲ್ಲಿ ಕಡಿಮೆ ಮತದಾನವಾಗುತ್ತಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ನಗರದ ಎರಡು ಕ್ಷೇತ್ರದಲ್ಲಿ ಶೇ.65 ರಷ್ಟು ಮತದಾನ ಆಗಿದ್ದರೆ, ಗ್ರಾಮಾಂತರ ಪ್ರದೇಶದಲ್ಲಿ ಶೇ.75ಕ್ಕಿಂತ ಹೆಚ್ಚು ಮತದಾನ ಆಗಿದೆ ಎಂದರು.
ದಾವಣಗೆರೆ ಉತ್ತರ ವ್ಯಾಪ್ತಿಯಲ್ಲಿ ಒಟ್ಟು 21 ಮತಗಟ್ಟೆಗಳಲ್ಲಿ ಶೇ.55ಕ್ಕಿಂತ ಕಡಿಮೆ ಮತದಾನವಾಗಿದೆ. ಆದ್ದರಿಂದ ಈ ಬಾರಿ ಮತದಾನವನ್ನು ಹೆಚ್ಚು ಮಾಡುವ ಉದ್ದೇಶದಿಂದ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಜಿಲ್ಲೆಯಲ್ಲಿ ಸಖಿ ಮಗಟ್ಟೆಗಳನ್ನು ತೆರೆಯಲಾಗುತ್ತಿದ್ದು ಮಹಿಳೆರಿಂದಲೇ ಅದರ ಸಂಪೂರ್ಣ ನಿರ್ವಹಣೆ ಮಾಡಲಾಗುತ್ತದೆ. 7 ಬೂತ್‍ಗಳಲ್ಲಿ ವಿಕಲಚೇತರು ಪೂರ್ಣ ಪ್ರಮಾಣದಲ್ಲಿ ನಿರ್ವಹಣೆ ಮಾಡುವರು.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕರ್ತವ್ಯ ನಿರತ ಪೊಲೀಸರಿಗೆ ಎರಡು ರೀತಿಯಲ್ಲಿ ಮತದಾನ ಮಾಡಲು ಅವಕಾಶ ಇರುತ್ತದೆ. ಒಂದು ಜಿಲ್ಲೆಯಲ್ಲೇ ಕರ್ತವ್ಯ ನಿರತ ಪೆÇಲೀಸರು, ಎಲ್ಲಿ ಕರ್ತವ್ಯ ನಿರ್ವಹಿಸುತ್ತಾರೋ ಅಲ್ಲೇ ಚುನಾವಣಾ ಕರ್ತವ್ಯ ಪ್ರಮಾಣ ಪತ್ರ ತೋರಿಸಿ ಮತದಾನ ಮಾಡಬಹುದು. ಜಿಲ್ಲೆಯ ಹೊರಗಡೆ ಮತ ಇದ್ದರೆ, ಅದರ ಮಾಹಿತಿಯನ್ನು ಪೆÇೀಸ್ಟಲ್ ತರಿಸಿ, ದಾವಣಗೆರೆಯಲ್ಲೇ ಮತದಾನ ಮಾಡಲು ಅವಕಾಶ ಮಾಡಿಕೊಡಲಾಗುವುದು. ಒಟ್ಟಾರೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಶೇ85 ಕ್ಕಿಂತ ಹೆಚ್ಚು ಮತದಾನ ಆಗಲು ಎಲ್ಲರೂ ಭಾಗವಹಿಸಿಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್ ಮಾತನಾಡಿ, ಪೆÇಲೀಸರು ವರ್ಗಾವಣೆ ಆಗುವುದರಿಂದ ಮತ್ತು ಬೇರೆ ಬೇರೆ ಕಾರಣದಿಂದ ಮತದಾನ ಮಾಡಲು ಸಾಧ್ಯವಾಗದಿರಬಹುದು. ಆದ್ದರಿಂದ ಜಿಲ್ಲೆಯಲ್ಲಿ ಕರ್ತವ್ಯ ನಿರತ ಪೆÇಲೀಸ್ ಸಿಬ್ಬಂದಿಗಳು ಮತಗಟ್ಟೆಯಲ್ಲಿ ಮತಚಲಾಯಿಸುವ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಪೊಲೀಸ್ ಸಿಬ್ಬಂದಿಗಳು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಪರಿಶೀಲಿಸಿಕೊಂಡು ಮೇ.7ರಂದು ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕು ಎಂದರು. ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿಯಲ್ಲಿನ ಮತಗಟ್ಟೆಗಳಲ್ಲಿ ನೀರು, ಶೌಚಾಲಯ, ಬಿಸಿಲಿನಿಂದ ರಕ್ಷಿಸಿಕೊಳ್ಳಲು ಶಾಮಿಯಾನ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗುತ್ತದೆ ಎಂದರು. ದಾವಣಗೆರೆ ನಗರದಲ್ಲಿ ಎರಡು ಮತ ಕ್ಷೇತ್ರಗಳಿದ್ದು, 2019ರ ಲೋಕಸಭಾ ಚುನಾವಣೆಯಲ್ಲಿ 42 ಮತಗಟ್ಟೆಗಳಲ್ಲಿ ಶೇ 55ಕ್ಕಿಂತ ಕಡಿಮೆ ಮತದಾನವಾಗಿದ್ದು, ಅದರಲ್ಲಿ ವಿದ್ಯಾನಗರ, ಕೆಟಿಜೆ ನಗರ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಕಡಿಮೆ ಮತದಾನವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ್ ಎಂ.ಸಂತೋಷ್, ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರ್ರೀನ್ ಭಾನು ಎಸ್. ಬಳ್ಳಾರಿ, ಉಪವಿಭಾಗಾಧಿಕಾರಿ ದುರ್ಗಾಶ್ರೀ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪ ನಿರ್ದೇಶಕಿÀ ವಾಸಂತಿ ಉಪ್ಪಾರ್, ಪಾಲಿಕೆ ಆಯುಕ್ತರಾದ ರೇಣುಕಾ, ಬಿಸಿಎಂ ಅಧಿಕಾರಿ ಗಾಯತ್ರಿ ಉಪಸ್ಥಿತರಿದ್ದರು.