ಹಾವೇರಿ ಜಿಲ್ಲೆಯಲ್ಲಿ ಸ್ಕೌಟ್ಸ್ ಸಂಸ್ಥೆಗೆ ಶಿಕ್ಷಣ ಇಲಾಖೆ ಸಂಪೂರ್ಣ ಸಹಕಾರ – ಬಿ ಎಸ್ ಜಗದೀಶ್ವರ

ಹಾವೇರಿ :ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವತಿಯಿಂದ ನೂತನವಾಗಿ ಹಾವೇರಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿರುವ ಬಿ.ಎಸ್. ಜಗದೀಶ್ವರ ಅವರನ್ನು ಸನ್ಮಾನಿಸಲಾಯಿತು.
ಸನ್ಮಾನಕ್ಕೆ ಕೃತಜ್ಞತೆ ಸೂಚಿಸಿ ಮಾತನಾಡಿದ ಜಗದೀಶ್ವರ ಅವರು ಮಕ್ಕಳ ಶಿಸ್ತು ಮತ್ತು ಆರೋಗ್ಯ ಹಿತ ಬಯಸುವ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ, ಕೋವಿಡ್ ಸಂದರ್ಭದಲ್ಲಿ ಶಿಕ್ಷಣ ಇಲಾಖೆಗೆ ರಾಜ್ಯಾದ್ಯಂತ ನೀಡಿದ ಸಹಕಾರ ಮತ್ತು ಸೇವೆಯು ಅಮೂಲ್ಯವಾದುದು. ಹಾವೇರಿ ಜಿಲ್ಲೆಯಲ್ಲಿ ಸ್ಕೌಟ್ಸ್ ಸಂಸ್ಥೆಗೆ ಶಿಕ್ಷಣ ಇಲಾಖೆಯು ಸಂಪೂರ್ಣ ಸಹಕಾರ ನೀಡುವುದು ಎಂದರು.

ಜಿಲ್ಲಾ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಮುಖ್ಯಸ್ಥರಾದ ಶ್ರೀಮತಿ ಮಾಧುರಿ ದೇವಧರ ಅವರು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿರುವ ಸ್ಕೌಟ್ಸ್ ಸಂಸ್ಥೆಯು ಮುಂಬರುವ ದಿನಗಳಲ್ಲಿ ಅನೇಕ ಮಕ್ಕಳ ಆರೋಗ್ಯ ಕುರಿತಾದ ಮುನ್ನೆಚ್ಚರಿಕೆ ಕುರಿತು ಜಾಗೃತಿಯನ್ನು ಮೂಡಿಸುವ ಪ್ರಯತ್ನದ ಹಿನ್ನಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಪೂರ್ಣ ಸಹಕಾರ ಬಯಸುತ್ತದೆ ಎಂದರು.
ಈ ಸಂದರ್ಭದಲ್ಲಿ ಶ್ರೀಮತಿ ಪರಿಮಳಾ ಜೈನ್, ಶೈಲಾ ಹಿಂಚಿಗೇರಿ, ಶೋಭಾ ಜಾಗಟಗೇರಿ, ಎಸ್. ಎಂ. ವಡೆಯರ್. ಮಂಜುಳಾ ಎಚ್, ಆನಂದ ಅಡಿಗ ಸೇರಿದಂತೆ ಅನೇಕರಿದ್ದರು.

Leave a Reply

Your email address will not be published. Required fields are marked *

error: Content is protected !!