22 ರೌಡಿ ಶೀಟರ್‌ಗಳ ಗಡಿಪಾರಿಗೆ ಕ್ರಮ: ಎಸ್ಪಿ ರಿಷ್ಯಂತ್

ದಾವಣಗೆರೆ: ಜಿಲ್ಲೆಯಲ್ಲಿ ಈಗಾಗಲೇ 13 ರೌಡಿ ಶೀಟರ್‌ಗಳನ್ನು ಗಡಿಪಾರು ಮಾಡಲಾಗಿದೆ ಎಂದು ಎಸ್ಪಿ ಸಿ.ಬಿ. ರಿಷ್ಯಂತ್ ಹೇಳಿದ್ದಾರೆ.
ಜಿಲ್ಲಾ ವರದಿಗಾರರ ಕೂಟದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಒಟ್ಟಾರೆ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕದಡುವ ಅನುಮಾನ ಇರುವ 22 ರೌಡಿಗಳನ್ನು ಗುರುತಿಸಲಾಗಿದ್ದು, ಎಲ್ಲರನ್ನೂ ಗಡಿಪಾರು ಮಾಡಲಾಗುವುದು. ಆ ಪೈಕಿ ಈಗಾಗಲೇ 13 ರೌಡಿಗಳು ಗಡಿಪಾರಾಗಿದ್ದಾರೆ ಎಂದರು.
ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆಯನ್ನು ಶಾಂತ ರೀತಿಯಿಂದ ನಡೆಸಲು ಅಗತ್ಯ ಕ್ರಮ ಗಳನ್ನು ಕೈಗೊಳ್ಳಲಾಗಿದೆ ಎಂದು ಎಸ್ಪಿ ಹೇಳಿದರು.
ಗಾಡಿಪಾರಾದ ರೌಡಿಶೀಟರ್‌ಗಳು ಅಲ್ಲಿನ ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ಪ್ರತಿ ದಿನ ಸಹಿ ಮಾಡಬೇಕಾಗುತ್ತದೆ. ಗಡಿಪಾರು ಶಿಕ್ಷೆ ಉಲ್ಲಂಘನೆಯಾದರೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಹೇಳಿದರು.