ತಾಯಿ ಕಳೆದಕೊಂಡ ನೋವಿನಲ್ಲೂ ಪಂತ್ ತಾಯಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿ
ಭಾರತೀಯ ಕ್ರಿಕೇಟಿಗ ರಿಷಬ್ ಪಂತ್ ಅವರ ರಸ್ತೆ ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಪಂತ್ ಅವರ ತಾಯಿಯೊಂದಿಗೆ ಕರೆ ಮಾಡಿ ಮಾತನಾಡಿದ್ದಾರೆ. ಪಂತ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸಿ, ಪಂತ ಅವರ ತಾಯಿಗೆ ಧೈರ್ಯ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಹಿಂದಿನ ದಿನ ರಿಷಬ್ ಅವರ ಅಪಘಾತದ ಬಗ್ಗೆ ಪ್ರಧಾನಿ ಮೋದಿ ದುಃಖ ವ್ಯಕ್ತಪಡಿಸಿದ್ದರು. ರಿಷಬ್ ಪಂತ್ ಅವರ ಕಾರು ಅಪಘಾತದಿಂದ ಮನನೊಂದ ಅವರು ಟ್ವೀಟ್ ಮಾಡಿದ್ದರು. ಅವರ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಮೋದಿ ಟ್ವೀಟ್ ಮೂಲಕ ತಿಳಿಸಿದ್ದರು. ನಿನ್ನೆ ಮೋದಿಯವರ ತಾಯಿ ನಿಧನರಾಗಿದ್ದರು. ಆ ನೋವಿನಲ್ಲೂ ಅವರು ಪಂತ್ ಅವರ ಆರೋಗ್ಯಾ ವಿಚಾರಿಸಿದ್ದಾರೆ.
ಶುಕ್ರವಾರ ಬೆಳಿಗ್ಗೆ 5.30ರ ಸುಮಾರಿಗೆ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಕ್ರಿಕೆಟಿಗ ರಿಷಬ್ ಪಂತ್ ಅವರ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪವಾಡ ರೀತಿಯಲ್ಲಿ ಪಂತ್ ಅಪಘಾತದಿಂದ ಬದುಕುಳಿದಿದ್ದಾರೆ. ಆದರೆ ಕಾರು ಸಂಪೂರ್ಣವಾಗಿ ಸುಟ್ಟು ಹೋಗಿದೆ. ಹರಿದ್ವಾರದ ಎಸ್ ಎಸ್ ಪಿ ಅಜಯ್ ಸಿಂಗ್ ಪಂತ್ ಅವರ ಅಪಘಾತದ ಬಗ್ಗೆ ಮಾಹಿತಿ ನೀಡಿದ್ದರು. ಪಂತ್ ಅವರು ನಿದ್ರಿಸಿ ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ಸಮಯದಲ್ಲಿ ಹರಿಯಾಣ ರೋಡ್ ವೇಸ್ ಬಸ್ ಅಲ್ಲಿಂದ ಹಾದು ಹೋಗುತ್ತಿತ್ತು. ಅದರ ಚಾಲಕ ತಕ್ಷಣ ಬಸ್ ನಿಲ್ಲಿಸಿ ರಿಷಬ್ ಪಂತ್ ಅವರನ್ನು ರಕ್ಷಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.