ಸಿಬಿಐ ನಿರ್ದೇಶಕರಾಗಿ ಡಿಜಿಪಿ ಪ್ರವೀಣ್ ಸೂದ್ ನೇಮಕ

ದಾವಣಗೆರೆ : ರಾಜ್ಯ ಪೊಲೀಸ್ ಮಹಾನಿರ್ದೇಶಕ(ಡಿಜಿ ಮತ್ತು ಐಜಿಪಿ) ಪ್ರವೀಣ್ ಸೂದ್ ಅವರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನೊಳಗೊಂಡ ತ್ರಿಸದಸ್ಯ ನೇಮಕಾತಿ ಸಮಿತಿಯು ಶನಿವಾರ ಅವರ ಹೆಸರನ್ನು ಅಂತಿಮಗೊಳಿಸಿದೆ.
ಪ್ರವೀಣ್ ಸೂದ್ ಸೂದ್ 2020 ಫೆಬ್ರವರಿ 1 ರಂದು ಕರ್ನಾಟಕದ ಡಿಜಿ ಮತ್ತು ಐಜಿಪಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.