ದಾವಣಗೆರೆ ವಿಶ್ವವಿದ್ಯಾನಿಲಯದ ಧಾನೇಶ್‌ಗೆ ಪಿಎಚ್.ಡಿ. ಪ್ರದಾನ
ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯದ ಗಣಕ ವಿಜ್ಞಾನ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಆರ್.ಧಾನೇಶ್ ಅವರು ಕಂಪ್ಯೂಟರ್ ವಿಜ್ಞಾನ ಮತ್ತು ಎಂಜಿನಿಯರಿoಗ್ ಅಧ್ಯಯನ ವಿಭಾಗಕ್ಕೆ ಸಲ್ಲಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು)ವು ಪಿಎಚ್.ಡಿ. ಪದವಿ ಪ್ರದಾನ ಮಾಡಿದೆ.
ದಾನೇಶ್ ಅವರು ದಾವಣಗೆರೆಯ ಯುಬಿಡಿಟಿ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ವಿಜ್ಞಾನ ಮತ್ತು ಎಂಜಿನಿಯರಿoಗ್ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ.ಸಿ.ಎಲ್. ಶ್ರೀನಿವಾಸ ನಾಯ್ಕ ಅವರ ಮಾರ್ಗದರ್ಶನದಲ್ಲಿ ‘ಆಟೋಮ್ಯಾಟಿಕ್ ರೈಪ್‌ನೆಸ್ ರಿಕಗ್ನೇಷನ್ ಸಿಸ್ಟೆಮ್ ಫಾರ್ ಅರೆಕಾನಟ್ ಬಂಚಸ್’ ವಿಷಯವಾಗಿ ಸಂಶೋಧನೆ ನಡೆಸಿದ್ದರು. ಧಾನೇಶ್ ಅವರು ಚಿತ್ರದುರ್ಗ ಜಿಲ್ಲೆ ಭರಮಸಾಗರ ಹೋಬಳಿ ಬೇವಿನಹಳ್ಳಿ ಗ್ರಾಮದವರು.