ಧರ್ಮಸ್ಥಳ ಹಾಗೂ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಹೋಗ್ತೀರಾ.? ಹಾಗಾದ್ರೆ ಈ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಿ

ದಕ್ಷಿಣ ಕನ್ನಡ: ಕೋವಿಡ್ ಮೂರನೇ ಅಲೆ ತಡೆಗಟ್ಟುವ ಉದ್ದೇಶದಿಂದ ರಾಜ್ಯಸರ್ಕಾರ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಿದ್ದು, ಸೇವಾರ್ಥ,‌ ಅನ್ನಸಂತರ್ಪಣೆ, ವಸತಿ ವ್ಯವಸ್ಥೆಗೆ ಕಡ್ಡಾಯವಾಗಿ ಸ್ಥಗಿತಗೊಳಿಸಿ ಆದೇಶಿಸಿದೆ.

ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆ. 5 ರಿಂದ ಆ.15 ರವರೆಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು ಸೇವೆ, ಪ್ರಸಾದ, ದಾಸೋಹ, ವಸತಿ ವ್ಯವಸ್ಥೆಗೆ ನಿರ್ಬಂಧಿಸಿದ್ದು, ವಾರಾಂತ್ಯದ ಶನಿವಾರ / ಭಾನುವಾರ ದೇವರ ದರ್ಶನವನ್ನೂ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ನೀಡಿದೆ.

ಪ್ರಸ್ತುತ, ಈ ದೇವಾಲಾಯಗಳಲ್ಲಿ ಹೊರ ರಾಜ್ಯದಿಂದ ಹಾಗೂ ಹೊರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ವಾರಾಂತ್ಯದಲ್ಲಿ ಆಗಮಿಸುತ್ತಿರುವುದರಿಂದ ಕೊವಿಡ್ -19 ನಿಯಂತ್ರಿಸಲು ಬೆಳಿಗ್ಗೆ ಗಂಟೆ 7ರಿಂದ ಮಧ್ಯಾಹ್ನ ಗಂಟೆ 11.30 ರ ವರೆಗೆ ಮತ್ತು ಮಧ್ಯಾಹ್ನ 12.15 ರಿಂದ 1.30 ರ ವರೆಗೆ ಹಾಗೂ ಅಪರಾಹ್ನ 2.30 ರಿಂದ ಸಾಯಂಕಾಲ ಗಂಟೆ 6.30 ಡೆ ವರೆಗೆ ದೇವರ ದರ್ಶನಕ್ಕೆ ಮಾತ್ರವೇ ಅವಕಾಶ ಕಲ್ಪಿಸಲಾಗಿದೆ.

ಭಕ್ತರು ಖಡ್ಡಾಯವಾಗಿ ಕೋವಿಡ್ ಮಾರ್ಗಸೂಚಿ ಪಾಲಿಸಿ ದೇವರ ದರ್ಶನ ಪಡೆಯಬಹುದಾಗಿದ್ದು, ಭಕ್ತಾದಿಗಳಿಗೆ ಕ್ಷೇತ್ರದಲ್ಲಿ ತೀರ್ಥ ಪ್ರಸಾದ,ಅನ್ನ ಸಂತರ್ಪಣೆ ಹಾಗೂ ಸೇವೆಗಳಿಗೆ ಅವಕಾಶವಿರುವುದಿಲ್ಲ . ವಾರಾಂತ್ಯದ ದಿನಗಳಾದ ಶನಿವಾರ ಭಾನುವಾರಗಳಂದು ಭಕ್ತಾದಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಹಾಗೂ ಶ್ರೀ ದೇವಳದ ವಸತಿಗೃಹಗಳಲ್ಲಿ ತಂಗಲು ಅವಕಾಶವಿಲ್ಲ. ವಾರಾಂತ್ಯ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ವಸತಿಗೃಹಗಳಲ್ಲಿ ತಂಗಲು ಬಯಸುವವರು 72 ಗಂಟೆಯೊಳಗೆ RT – PCR ಟೆಸ್ಟ್ ಮಾಡಿಸಿ, ನೆಗೆಟಿವ್‌ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿದ್ದರೆ ಮಾತ್ರ ವಸತಿಗೃಹದಲ್ಲಿ ತಂಗಲು ಅವಕಾಶ ನೀಡಲಾಗಿದೆ.

Leave a Reply

Your email address will not be published. Required fields are marked *

error: Content is protected !!