ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ ಹಾಗೂ ಕಟೀಲು ದೇಗುಲಕ್ಕೆ ತೆರಳುವ ಭಕ್ತಾದಿಗಳಿಗೆ ಹೊಸ ಕೊವಿಡ್ ಮಾರ್ಗಸೂಚಿ ಬಿಡುಗಡೆ
ದಕ್ಷಿಣ ಕನ್ನಡ: ಕೇವಲ ದರ್ಶನ ಹೊರತುಪಡಿಸಿ ತೀರ್ಥ ಪ್ರಸಾದ ಇತರ ಸೇವೆಗಳು ಹಾಗೂ ಅನ್ನಸಂತರ್ಪಣೆ ಸೇವೆಗೆ ನಿಷೇಧ ಹೇರಲಾಗಿದೆ. ದೇವಸ್ಥಾನಗಳಲ್ಲಿರುವ ವಸತಿಗೃಹಗಳಲ್ಲಿ ಭಕ್ತಾದಿಗಳು ತಂಗಲು ಅವಕಾಶ ನಿರಾಕರಿಸಲಾಗಿದ್ದು
ದೇವಸ್ಥಾನಕ್ಕೆ ಬರುವ ಭಕ್ತಾದಿಗಳು ಸಾಮಾಜಿಕ ಹಾಗೂ ಮುಖ ಕವಚ ಹಾಕುವುದು ಕಡ್ಡಾಯ ಮಾಡಲಾಗಿದೆ.
ಕೇರಳದ ಗಡಿಭಾಗ ಹಂಚಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರೋನಾ ಪಾಸಿಟಿವ್ ಪ್ರಕರಣಗಳು ಮುಖ್ಯವಾಗಿ ಕೇರಳ ರಾಜ್ಯದಲ್ಲಿ ಹೆಚ್ಚುತ್ತಿರುವ ಪ್ರಕರಣಗಳೇ ಕಾರಣವಾಗಿದೆ.
ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಕೇರಳದಿಂದ ಜಿಲ್ಲೆಗೆ ಆಗಮಿಸುವ ಜನರಿಗೆ ಹಲವು ರೀತಿಯ ನಿರ್ಬಂಧಗಳನ್ನು ಹೇರುವ ಮೂಲಕ ಕರೋನಾ ತಡೆಯುವ ಪ್ರಯತ್ನದಲ್ಲಿ ನಿರಂತರವಾಗಿದೆ.
ಅಲ್ಲದೆ ಜಿಲ್ಲೆಯಲ್ಲಿ ರಾಜ್ಯದ ಪ್ರಮುಖ ದೇವಸ್ಥಾನಗಳು ಎಂದು ಗುರುತಿಸಲ್ಪಟ್ಟಿರುವ ಹಲವು ಪುಣ್ಯ ಕ್ಷೇತ್ರಗಳಿಗೆ ಕ್ಷೇತ್ರಗಳಿಗೆ ರಾಜ್ಯ ಆಗುವ ರಾಜ್ಯಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭೇಟಿ ನೀಡುವ ಹಿನ್ನೆಲೆಯಲ್ಲಿ.
ಪ್ರಮುಖ ಪುಣ್ಯಕ್ಷೇತ್ರ ಗಳಿಂದ ಸಂಬಂಧಿಸಿದಂತೆ ಜಿಲ್ಲಾಡಳಿತ ಹೊಸ ಕರೋನಾ ಮಾರ್ಗಸೂಚಿಯನ್ನು ಹೊರಡಿಸಿದೆ.
ಪ್ರಮುಖವಾಗಿ ರಾಜ್ಯದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನಕ್ಕೆ ಅನ್ವಯಿಸುವಂತೆ ಈ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ.
ಈ ಮೂರು ದೇವಸ್ಥಾನಗಳಲ್ಲಿ ಭಕ್ತಾದಿಗಳಿಗೆ ಮುಂಜಾನೆ 7 ರಿಂದ ರಾತ್ರಿ 7 ತನಕ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ದರ್ಶನ ಹೊರತುಪಡಿಸಿ ತೀರ್ಥಪ್ರಸಾದ ಇತರ ಸೇವೆಗಳಿಗೆ ನಿಷೇಧ ಹೇರಲಾಗಿದೆ ಹಾಗೂ ಶನಿವಾರ ಹಾಗೂ ಭಾನುವಾರಗಳಂದು ಭಕ್ತಾದಿಗಳಿಗೆ ದೇವರ ದರ್ಶನವನ್ನು ನಿರಾಕರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ ರಾಮಚಂದ್ರ ಆದೇಶ ಹೊರಡಿಸಿದ್ದಾರೆ