Dhuda Sites Muthalik: ದಾವಣಗೆರೆ- ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಹಂಚಿಕೆಯಲ್ಲಿ ಅಕ್ರಮ : ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆರೋಪ

ದಾವಣಗೆರೆ: ದಾವಣಗೆರೆ- ಹರಿಹರ ನಗರಾಭಿವೃದ್ಧಿ ಪ್ರಾಧಿಕಾರವು 2014ರ ನಿವೇಶನ ಹಂಚಿಕೆಯಲ್ಲಿ ಅಕ್ರಮ ಎಸಗಿತ್ತು. ಈಗ ಮತ್ತೆ 2017ರಲ್ಲೂ ಕೂಡ ಅಕ್ರಮ ನಡೆಸಿದ್ದು, ಪ್ರಾಧಿಕಾರ ಹಂಚಿಕೆ ಮಾಡಿರುವ 200 ನಿವೇಶನಗಳಲ್ಲಿ 103 ನಿವೇಶನಗಳನ್ನು ಜನಪ್ರತಿನಿಧಿಗಳು, ಅಧಿಕಾರಿಗಳು ಪ್ರಭಾವ ಬೀರಿ ಬೆಂಬಲಿಗರಿಗೆ, ಆಪ್ತಸಹಾಯಕರಿಗೆ ಮತ್ತು ಕುಟುಂಬಸ್ಥರಿಗೆ ಅಕ್ರಮವಾಗಿ ಹಂಚಿಕೆ ಮಾಡಿಸಿದ್ದಾರೆ ಎಂದು ಶ್ರೀರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.
ಕೆಪಿಸಿಸಿ ವಕ್ತಾರ ಡಿ.ಬಸವರಾಜ್ ತಮ್ಮ ಸಹೋದರ ಡಿ.ಶಿವಕುಮಾರ್, ಸಂಬಂಧಿಕರಾದ ಡಿ.ಸಂತೋಷ್, ಡಿ.ನಿಂಗರಾಜುಗೆ ಅಕ್ರಮವಾಗಿ ನಿವೇಶನ ಕೊಡಿಸಿದ್ದಾರೆ. ಅಕ್ರಮ ನಿವೇಶನ ಹಂಚಿಕೆಯಲ್ಲಿ ಭಾಗಿಯಾಗಿರುವ ಧೂಡಾ ಮಾಜಿ ಅಧ್ಯಕ್ಷ ಜೆ.ಹೆಚ್.ರಾಮಚಂದ್ರಪ್ಪ, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ,
ಹರಿಹರ ಮಾಜಿ ಶಾಸಕ ಹೆಚ್.ಎಸ್.ಶಿವಶಂಕರ್, ಆಗಿನ ಪಾಲಿಕೆ ಆಯುಕ್ತ ಮಂಜುನಾಥ್ ಬಳ್ಳಾರಿ, ದೂಡಾ ಆಯುಕ್ತ ಆದಪ್ಪ ಸೇರಿದಂತೆ 134 ಜನರ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗುವುದು ಎಂದು ಅವರು ತಿಳಿಸಿದರು.
ಸಂಘಟನೆ ಜಿಲ್ಲಾಧ್ಯಕ್ಷ ಮಣಿಕಂಠ, ಮುಖಂಡರಾದ ಆಲೂರು ರಾಜಶೇಖರ್, ಸಾಗರ್, ಕರಾಟೆ ರಮೇಶ್, ಶ್ರೀಧರ್, ಸುನೀಲ್ ವಾಲಿ, ವಿನೋದ್ ಮತ್ತಿತರರು ಗೋಷ್ಠಿಯಲ್ಲಿದ್ದರು.

Leave a Reply

Your email address will not be published. Required fields are marked *

error: Content is protected !!