ಚಿನ್ನ ದ ಆಸೆಗೆ ಬಿದ್ದು ಬೆಳ್ತಂಗಡಿ ಮೂಲದ ಮೂರು ಜನ ತುಮಕೂರಿನಲ್ಲಿ ಬಲಿಯಾದರೇ ? ತುಮಕೂರಿನ ಸ್ವಾಮಿ ಸಹಿತ ಐದು ಜನರನ್ನು ಕೋರಾ ಪೊಲೀಸ್‌ ವಶ

ತುಮಕೂರಿನಲ್ಲಿ ಬೆಳ್ತಂಗಡಿ ಮೂಲದ ಮೂವರು ಇದ್ದ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45), ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್ (56), ಶಿರ್ಲಾಲು ಗ್ರಾಮದ ಸಿದ್ದಿಕ್ (34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದು, ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಎನ್ನುವುದು ಪ್ರಾಥಮಿಕ ವಿಚಾರಣೆ ವೇಳೆ ತಿಳಿದು ಬಂದಿದೆ.

ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಉದ್ದೇಶದಿಂದ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್‌ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!