ವಾಲ್ಮೀಕಿ ಜಾತ್ರೆಗೆ ಬಾರದ ಗಣ್ಯರು: ಸಮಾಜದ ಮುಖಂಡರಿಂದ ಆಕ್ರೋಶ
ದಾವಣಗೆರೆ: ಹರಿಹರ ತಾಲ್ಲೂಕು ರಾಜನಹಳ್ಳಿಯ ಶ್ರೀ ವಾಲ್ಮೀಕಿ ಪೀಠದಲ್ಲಿ ನಡೆಯುತ್ತಿರುವ ಮಹರ್ಷಿ ವಾಲ್ಮೀಕಿ ಜಾತ್ರೆಗೆ ಪ್ರಮುಖ ರಾಜಕಾರಣಿಗಳು ಗೈರು ಹಾಜರಾಗಿರುವುದು ಸಮಾಜದ ನಾಯಕರಲ್ಲಿ ಆಕ್ರೋಶ ಉಂಟು ಮಾಡಿದೆ.
ಫೆ.8 ಹಾಗೂ 9 ರಂದು ಐದನೇ ವರ್ಷದ ವಾಲ್ಮೀಕಿ ಜಾತ್ರಾ ಮಹೋತ್ಸವವ್ನು ವಾಲ್ಮೀಕಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ, ಶಾಸಕ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ವಿ ರಾಮಚಂದ್ರಪ್ಪ ಅಧ್ಯಕ್ಷತೆಯಲ್ಲಿ ಅದ್ದೂರಿಯಾಗಿ ನಡೆಸಲು ತೀರ್ಮಾನಿಸಲಾಗಿತ್ತು.
ಅದರಂತೆ ಇಂದು 8ರಂದು ಬುಧವಾರ ಜಾತ್ರಾ ಮಹೋತ್ಸವ ಉದ್ಘಾಟನೆಗೆ ಅನೇಕ ಪ್ರಮುಖ ರಾಜಕಾರಣಿಗಳು ಗೈರು ಹಾಜರಾಗಿದ್ದುದು, ಸಂಭ್ರಮಕ್ಕೆ ತಣ್ಣೀರೆರಚಿದಂತಾಯಿತು. ಈ ಹಿನ್ನೆಲೆಯಲ್ಲಿ ಗೈರಾದ ನಾಯಕ ರೇಲೆ ಸಮಾಜದ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, ಬಾರದ ನಾಕರಿಗೆ ಆಹ್ವಾನ ನೀಡದಂತೆ ಶ್ರೀಗಳಿಗೆ ಮನವಿ ಮಾಡಿದರು.
ಬೆಂಗಳೂರು ಮೂಲದ ಉದ್ಯಮಿ ಎಂ. ನಾರಾಯಣ ಸ್ವಾಮಿ ಗೈರು ಹಾಜರಾದ ಜನಪ್ರತಿನಿಧಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂರು.
ವಾಲ್ಮೀಕಿ ಸಮುದಾಯದ ನಾಯಕರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಸುರಪುರ ಶಾಸಕ ನರಸಿಂಹ ನಾಯಕ(ರಾಜು ಗೌಡ), ಮಾನ್ವಿ ಶಾಸಕ ರಾಜಾ ವೆಂಕಟಪ್ಪ ನಾಯಕ, ಕಂಪ್ಲಿ ಶಾಸಕ ಜೆ ಎನ್ ಗಣೇಶ್, ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ಹಾಗೂ ಎಚ್.ಡಿ ಕೋಟೆ ಶಾಸಕ ಅನಿಲ್ ಚಿಕ್ಕಮಾದು, ಮಾಜಿ ಸಂಸದೆ ಜೆ.ಶಾಂತಾ ಗೈರು ಜಾತ್ರಾ ಮಹೋತ್ಸವಕ್ಕೆ ಗೈರು ಹಾಜರಾಗಿದ್ದರು.
ನಾಲ್ವಡಿ ವೆಂಕಟಪ್ಪ ನಾಯಕ ಭಾವಚಿತ್ರ ಅನಾವರಣಗೊಳಿಸಬೇಕಿದ್ದ ಶಾಸಕ ರಾಜು ಗೌಡ ಸೇರಿ ಸಮಾಜದ ಶಾಸಕರು ಗೈರಾಗಿದ್ದರೆ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಸಹ ಗೈರುಾಗಿದ್ದರು. ಅವರು ಉದ್ಯೋಗ ಮೇಳ ಉದ್ಘಾಟಿಸಬೇಕಿತ್ತು.