ನೂತನ ಶಿಕ್ಷಣ ನೀತಿ ಒಪ್ಪಲ್ಲ:ಸತೀಶ್ ಜಾರಕಿಹೋಳಿ

ಬೆಳಗಾವಿ: ಕೇಂದ್ರ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕೇಸರೀಕರಣ ಆಗಬಾರದು. ಅದರ ಬಗ್ಗೆ ಶಿಕ್ಷಣ ತಜ್ಞರು, ಪರಿಣತರು ಕೂಡ ತಕರಾರು ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಇದೇ ಅಭಿಪ್ರಾಯ ಪಟ್ಟಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.
ಸರ್ಕಾರ ರೂಪಿಸಿದ ನೂತನ ಶಿಕ್ಷಣ ನೀತಿಯನ್ನು ನಾವು ಹಿಂದೆಯೂ ಒಪ್ಪಿರಲಿಲ್ಲ. ಈಗಲೂ ಒಪ್ಪುವುದಿಲ್ಲ. ತಜ್ಞರ ಹೊಸ ಸಮಿತಿ ರಚಿಸಿ, ಪರಾಮರ್ಶೆ ಮಾಡಲಾಗುವುದು. ಅಲ್ಲಿ ಬರುವ ಅಭಿಪ್ರಾಯದ ಮೇಲೆ ಹೆಜ್ಜೆ ಇಡಲಾಗುವು ಎಂದೂ ಅವರು ಹೇಳಿದ್ದಾರೆ.