‘ತಮ್ಮ ಹಾಗೂ ಬಿಎಸ್‌ವೈ ನಡುವೆ ಭಿನ್ನಾಭಿಪ್ರಾಯ’ ಎಂಬುದು ಸುಳ್ಳು: ನಿರೀಕ್ಷಿಸಿದವರಿಗೆ ನಿರಾಶೆ ಖಚಿತ ಎಂದ ಸಿಎಂ

cm basavaraj bommai on acb appeal to supreme court

ಕೊಪ್ಪಳ: ಕಾಂಗ್ರೆಸ್ ಮನೆಗೆ ಬಾಗಿಲು, ಕಿಟಕಿ ಏನಿಲ್ಲ, ಬಟಾಬಯಲು ಎಂದು ಮುಖ್ಯಮಂತ್ರಿಗಳು ತಿರುಗೇಟು ನೀಡಿದ್ದಾರೆ. ಬಿಜೆಪಿ ಮನೆಯೊಂದು ಮೂರು ಬಾಗಿಲು ಎಂಬ ಶಾಸಕ ಪ್ರಿಯಾಂಕ ಖರ್ಗೆ ಅವರ ಹೇಳಿಕೆಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ ‌

 

ಕೊಪ್ಪಳದ ಗಿಣಿಗೇರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ ಸರ್ವೋಚ್ಚ ನಾಯಕರು. ಅವರನ್ನು ಮುಂದಿಟ್ಟುಕೊಂಡೇ ಎಲ್ಲಾ ಕಾರ್ಯಕ್ರಮ ಮಾಡುತ್ತಿದ್ದೇವೆ. ಅವರ ಆಶೀರ್ವಾದ ನಮಗಿದೆ. ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಕಾರ್ಯಕ್ರಮಕ್ಕೆ ಅವರು ಆಗಮಿಸಿದ್ದಾರೆ ಎಂದರು.

 

ತಮ್ಮ ಹಾಗೂ ಯಡಿಯೂರಪ್ಪ ಅವರ ನಡುವೆ ಭಿನ್ನಾಭಿಪ್ರಾಯ ಇದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಮ್ಮದು ತಂದೆ ಮಕ್ಕಳ ಸಂಬಂಧ. ಯಾವುದೇ ಕಾರಣಕ್ಕೂ ಯಾವುದೇ ಸಂದರ್ಭದಲ್ಲಿಯೂ ಅದು ಬರುವುದಿಲ್ಲ. ನಿರೀಕ್ಷೆ ಮಾಡುವವರಿಗೆ ನಿರಾಸೆಯಾಗುತ್ತದೆ ಎಂದರು.

 

 

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!