ರಾಮ ಮಂದಿರಕ್ಕೆ ಹುತಾತ್ಮರ ಹೆಸರಿರುವ ಬೆಳ್ಳಿ ಇಟ್ಟಿಗೆ ರವಾನೆ: ಮೋದಿಗೆ ಹಸ್ತಾಂತರಿಸುವ ಜಿಲ್ಲಾ ಬಿಜೆಪಿ
ದಾವಣಗೆರೆ: ರಾಮಜ್ಯೋತಿ ರಥ ಯಾತ್ರೆ ವೇಳೆ ನಡೆದ ಗಲಭೆಯಲ್ಲಿ ಬಲಿಯಾದ 8 ಜನ ಹೋರಾಟಗಾರರ ಹೆಸರನ್ನು 15 ಕೆಜಿ ಬೆಳ್ಳಿ ಇಟ್ಟಿಗೆಯಲ್ಲಿ ಕೆತ್ತಿಸಿ ಅಯೋಧ್ಯೆಗೆ ನೀಡಲು ಪ್ರಧಾನಿ ಮೋದಿಗೆ ನೀಡಲಾಗುವುದು ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್ ಹೇಳಿದರು. ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆ ನಡೆಯಲಿದ್ದು ಪ್ರಧಾನಿ ಮೋದಿ ಬೆಳ್ಳಿ ಇಟ್ಟಿಗೆ ನೀಡಲಾಗುವುದು ಎಂದು ಯಶವಂತರಾವ್ ಜಾಧವ್ ಹೇಳಿದರು.
ರಾಮಮಂದಿರ ಶಿಲಾನ್ಯಾಸ ನೆರವೇರುತ್ತಿರುವ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯಿಂದ 15 ಕೆ.ಜಿ.ಬೆಳ್ಳಿ ಇಟ್ಟಿಗೆಯನ್ನು ಕೊಂಡೊಯ್ಯಲು ಹಿಂದೂ ಪರ ಸಂಘಟನೆಗಳು ಮುಂದಾಗಿವೆ.
1990ರಲ್ಲಿ ದಾವಣಗೆರೆಯಲ್ಲಿ ನಡೆದ ಗೋಲಿಬಾರ್‌ನಲ್ಲಿ ಮೃತಪಟ್ಟವರ ಸವಿನೆನಪಿಗಾಗಿ 10 ಲಕ್ಷದ ಮೌಲ್ಯದ 15 ಕೆ.ಜಿ.ತೂಕದ ಬೆಳ್ಳಿಯ ಇಟ್ಟಿಗೆಯನ್ನು ಅಯೋಧ್ಯೆಗೆ ನೀಡಲು ಶ್ರೀರಾಮ ಭಕ್ತರು ಹಾಗೂ ಹಿಂದೂಪರ ಸಂಘಟನೆಗಳ ಮುಖಂಡರು ತೀರ್ಮಾನಿಸಿದ್ದಾರೆ ಎಂದು ಬಿಜೆಪಿ ಜಿಲ್ಲಾಘಟಕದ ಮಾಜಿ ಅಧ್ಯಕ್ಷ ಯಶವಂತರಾವ್ ಇಂದಿಲ್ಲಿ ತಿಳಿಸಿದ್ದಾರೆ.
1990ರ ಅಕ್ಟೋಬರ್ 6ರಂದು ಬೇತೂರು ರಸ್ತೆಯಲ್ಲಿರುವ ವೆಂಕಟೇಶ್ವರ ವೃತ್ತದಲ್ಲಿ ನಡೆದ ಗೋಲಿಬಾರ್‌ನಲ್ಲಿ 8 ಜನರು ಮೃತಪಟ್ಟಿದ್ದು, 72ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿತ್ತು. ಈ ಪೈಕಿ 40ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದರು. ಅಂದು ಹುತಾತ್ಮರಾದ 8 ಮಂದಿಯ ಹೆಸರನ್ನು ಇಟ್ಟಿಗೆಯಲ್ಲಿ ಕೆತ್ತಿಸಲಾಗುತ್ತದೆ ಎಂದು ಹೇಳಿದರು.