ದಾವಣಗೆರೆಯಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ವಸ್ತುಗಳ ಪ್ರದರ್ಶನ ಮತ್ತು ಮಾರಾಟ

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ ಬೆಂಗಳೂರು ವತಿಯಿಂದ ಭಾರತಾಂಭೆ ಮಹಿಳಾ ಖಾದಿ ಮತ್ತು ಗ್ರಾಮೋದ್ಯೋಗ ಕೈಗಾರಿಕಾ ಸಂಘ ರವರ ಮೂಲಕ ದಾವಣಗೆರೆ ಜಿಲ್ಲೆಯಲ್ಲಿ ಫೆ.24 ರಿಂದ ಮಾ.10 ರವರಿಗೆ ಸರ್ಕಾರಿ ಕಾಲೇಜ್ ಮೈದಾನದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ವಸ್ತುಗಳ ಪ್ರದರ್ಶನ ಹಾಗೂ ಮಾರಾಟವನ್ನು ಹಮ್ಮಿಕೊಳ್ಳಲಾಗಿದೆ.
ಎಂ.ಎಸ್.ಎಂ.ಇ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ನಿರ್ದೇಶಕರಾದ ವಿನೋತ್‍ಪ್ರಿಯ ಅವರು ಫೆ.24 ರ ಸಂಜೆ 5.00 ಗಂಟೆಗೆ ಖಾದಿ ಉತ್ಸವದ ಉದ್ಘಾಟನೆ ನೆರವೇರಿಸುವರು. ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಕಾರ್ಯಕ್ರಮದ ಆಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.