“ಕೌಶಲ್ಯ ಸ್ಪೂರ್ತಿ” ಅಡಿಯಲ್ಲಿ “ಜಿಲ್ಲಾಧಿಕಾರಿಗಳೊಂದಿಗೆ ಒಂದು ದಿನ”(District Collector Shadowing)

ದಾವಣಗೆರೆ: ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಜುಲೈ.15 ರಂದು ವಿಶ್ವ ಯುವ ಕೌಶಲ್ಯ ದಿನಾಚರಣೆಯ ಪ್ರಯುಕ್ತವಾಗಿ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಪದವಿ ಪೂರ್ವ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು.
ಸ್ಪರ್ಧೆಗೆ ಜಿಲ್ಲೆಯಿಂದ ಒಟ್ಟು 24 ವಿದ್ಯಾರ್ಥಿಗಳು ಭಾಗವಹಿಸಿದ್ದು, ಹರಿಹರ ತಾಲ್ಲೂಕಿನ ಪ್ರಥಮ ವರ್ಷದ ಬಿ.ಎಸ್ಸಿ. ವಿದ್ಯಾರ್ಥಿನಿ ಲಕ್ಷ್ಮಿ.ಎಂ.ಪಿ. ವಿಜೇತರಾಗಿದ್ದು, ವಿಜೇತರಾಗಿರುವ ವಿದ್ಯಾರ್ಥಿನಿಯು “ಕೌಶಲ್ಯ ಸ್ಪೂರ್ತಿ” ಅಡಿಯಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಒಂದು ದಿನ. (District Collector Shadowing) ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡಲಾಗಿದೆ.
ಪ್ರಬಂಧ ಸ್ಪರ್ಧೆಯಲ್ಲಿ ವಿಜೇತಳಾದ ಲಕ್ಷ್ಮಿ.ಎಂ.ಪಿ ರವರು ಆಗಸ್ಟ್.20 ರಂದು ಜಿಲ್ಲಾಧಿಕಾರಿ ಶಿವಾನಂದ್ ಕಾಪಶಿ ಅವರೊಂದಿಗೆ ಕಛೇರಿ ಕೆಲಸಗಳಲ್ಲಿ ಭಾಗವಹಿಸುವುದರ ಜೊತೆಗೆ ಡಿ.ದೇವರಾಜ ಅರಸು ಅವರ 107ನೇ ಜನ್ಮ ದಿನಾಚರಣೆಯಲ್ಲಿ ಭಾಗವಹಿಸಿದ್ದಾರೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಬಸನಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.