ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಮತ್ತು ಔಷಧಿ ದರ ಏರಿಕೆ ವಿರುದ್ಧ ಜಿಲ್ಲಾ ಕಾಂಗ್ರೆಸ್‍ನಿಂದ ಏ.4ರಂದು ಪ್ರತಿಭಟನೆ

4

ದಾವಣಗೆರೆ : ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಮತ್ತು ಔಷಧಿ ದರ ಏರಿಕೆಯನ್ನು ಖಂಡಿಸಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ದಿನಾಂಕ 04-04-2022ರ ಸೋಮವಾರದಂದು ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಮತ್ತು ಜಿಲ್ಲಾಧ್ಯಕ್ಷರಾದ ಹೆಚ್.ಬಿ. ಮಂಜಪ್ಪನವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 11 ಕ್ಕೆ ದಾವಣಗೆರೆ ನಗರದ ಜಯದೇವ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಗೊಂಡು ಉಪ ವಿಭಾಗಾಧಿಕಾರಿಗಳ ಕಛೇರಿಗೆ ತೆರಳಿ ಮನವಿ ಸಲ್ಲಿಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಅಯೂಬ್ ಪೈಲ್ವಾನ್, ಕೆ.ಜಿ.ಶಿವಕುಮಾರ್, ಮಾಗಾನಹಳ್ಳಿ ಪರಶುರಾಮ್, ಜಿ.ಸಿ.ನಿಂಗಪ್ಪ, ಮಹಾನಗರ ಪಾಲಿಕೆ ವಿಪಕ್ಷ ನಾಯಕ ಜಿ.ಎಸ್.ಮಂಜುನಾಥ್ ಭಾಗವಹಿಸಲಿದ್ದಾರೆ. ಆದ ಕಾರಣ ಪಕ್ಷದ ಎಲ್ಲಾ ಜನಪ್ರತಿನಿಧಿಗಳು, ಜಿಲ್ಲಾ ಕಾಂಗ್ರೆಸ್ ಮುಖಂಡರು, ಜಿಲ್ಲೆಯ ಎಲ್ಲಾ ಬ್ಲಾಕ್ ಅಧ್ಯಕ್ಷರುಗಳು, ಜಿಲ್ಲಾ ಮಹಿಳಾ ಕಾಂಗ್ರೆಸ್, ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಘಟಕ, ಜಿಲ್ಲಾ ಎನ್.ಎಸ್.ಯು.ಐ.ಘಟಕ, ಯುವ ಕಾಂಗ್ರೆಸ್, ಜಿಲ್ಲಾ ಸೇವಾದಳ ಘಟಕ, ಜಿಲ್ಲಾ ಕಿಸಾನ್ ಕಾಂಗ್ರೆಸ್ ಘಟಕ , ಜಿಲ್ಲಾ ಕಾರ್ಮಿಕ ವಿಭಾಗ , ಜಿಲ್ಲಾ ಓ.ಬಿ.ಸಿ, ಅಲ್ಪಸಂಖ್ಯಾತರ ಘಟಕ, ವಿಕಲಚೇತನ, ಅಸಂಘಟಿತ ಕಾರ್ಮಿಕರ ಘಟಕ , ಜಿಲ್ಲಾ ವೈದ್ಯಕೀಯ ಹಾಗೂ ವಕೀಲರ ಘಟಕ, , ಜಿ.ಪಂ. ಮಾಜಿ ಸದಸ್ಯರು , ತಾ.ಪಂ. ಮಾಜಿ ಸದಸ್ಯರು , ಮಹಾನಗರ ಪಾಲಿಕೆ ಹಾಲಿ ಮತ್ತು ಮಾಜಿ ಸದಸ್ಯರು , ಎ.ಪಿ.ಎಂ.ಸಿ. ಸದಸ್ಯರು ಹಾಗೂ ಗ್ರಾ.ಪಂ. ಸದಸ್ಯರುಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ . ಶೆಟ್ಟಿ ಕೋರಿದ್ದಾರೆ .

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!