ಜನವರಿ 25 ಮತ್ತು 26 ರಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ದಾವಣಗೆರೆ : ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ(ಬೈರತಿ) ಅವರು ಜನವರಿ 25 ಮತ್ತು 26 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಜ.25 ರಂದು ಮಧ್ಯಾಹ್ನ 1.30ಕ್ಕೆ ಹಿರಿಯೂರಿನಿಂದ ಹೊರಟು ಮಧ್ಯಾಹ್ನ 03 ಗಂಟೆಗೆ ದಾವಣಗೆರೆ ಆಗಮಿಸುವರು. ನಂತರ ಮ.3.15ಕ್ಕೆ ಬಸವನಗರದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ಠಾಣೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮ.3.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸುವರು ಹಾಗೂ ರಾತ್ರಿ 07 ಗಂಟೆಗೆ ತ್ರಿಶೂಲ್ ಕಲಾಭವನದಲ್ಲಿ ನಡೆಯುವ ವಿವಾಹ ಆರತಕ್ಷತೆಯಲ್ಲಿ ಪಾಲ್ಗೊಳ್ಳುವರು.
ಜ.26 ರಂದು ಬೆಳಿಗ್ಗೆ 8.30ಕ್ಕೆ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಹುತಾತ್ಮ ದಿನಾಚರಣೆ ಅಂಗವಾಗಿ ರಾಯಣ್ಣರವರ ಪ್ರತಿಮೆಗೆ ಮಾಲಾರ್ಪಣೆ ಮಾಡುವರು. ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಿರುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ 10.30ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರೆಂದು ಪ್ರಕಟಣೆ ತಿಳಿಸಿದೆ.