ಕ್ರೀಡಾಶಾಲೆ, ನಿಲಯಗಳಿಗೆ ಜ.೧೪ ರಂದು ಜಿಲ್ಲಾಮಟ್ಟದ ಆಯ್ಕೆ ಪ್ರಕ್ರಿಯೆ

ದಾವಣಗೆರೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ರಾಜ್ಯದ ವಿವಿಧ ಸ್ಥಳಗಳಲ್ಲಿ ನಡೆಸುತ್ತಿರುವ ಕ್ರೀಡಾಶಾಲೆ ಹಾಗೂ ಕ್ರೀಡಾ ನಿಲಯಗಳಿಗೆ ೨೦೨೨-೨೩ನೇ ಸಾಲಿನಲ್ಲಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ, ಕ್ರೀಡಾಶಾಲೆ/ನಿಲಯಗಳಿಗೆ ಆಯ್ಕೆ ಮಾಡುವ ಜಿಲ್ಲಾ ಮಟ್ಟದ ಆಯ್ಕೆ ಪ್ರಕ್ರಿಯೆ ದಿನಾಂಕದಲ್ಲಿ ಬದಲಾವಣೆ ಮಾಡಲಾಗಿದ್ದು, ಜಿಲ್ಲಾ ಮಟ್ಟದಲ್ಲಿ ಜ. ೧೫ ರ ಬದಲಿಗೆ ಜ. ೧೪ ರಂದು ಅಂದರೆ ಒಂದು ದಿನ ಮೊದಲು ನಡೆಸಲಾಗುವುದು.

ಜಿಲ್ಲಾ ಮಟ್ಟದಲ್ಲಿ ಆಯ್ಕೆ ಪ್ರಕ್ರಿಯಯನ್ನು ಜ. ೧೫ ರಂದು ನಡೆಸಲು ನಿಗದಿಪಡಿಸಲಾಗಿತ್ತು.  ಆದರೆ ಕೋವಿಡ್-೧೯ ಕಾರಣದಿಂದಾಗಿ ಸರ್ಕಾರವು ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿರುವುದರಿಂದ, ಜ. ೧೫ ರಂದು ನಡೆಸಬೇಕಾಗಿದ್ದ ಜಿಲ್ಲಾ ಮಟ್ಟದ ಆಯ್ಕೆ ಪ್ರಕ್ರಿಯೆಯನ್ನು ಜ.೧೪ ರಂದು ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಇಲ್ಲಿ ಸಂಘಟಿಸಲಾಗುವುದು.

ಜಿಲ್ಲಾ ಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಜ.೧೪ ರಂದು ಬೆಳಿಗ್ಗೆ ೧೦.೩೦ ಕ್ಕೆ ಸರಿಯಾಗಿ ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಇಲ್ಲಿ ಸಂಘಟಕರಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಹೆಚ್ಚಿನ ವಿವರಗಳಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಾವಣಗೆರೆ ಕಛೇರಿ ಅಥವಾ ದೂರವಾಣಿ ಸಂಖ್ಯೆ: ೦೮೧೯೨-೨೩೭೪೮೦ ಸಂಪರ್ಕಿಸುವಂತೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!