ಜಿಲ್ಲಾ ಉಸ್ತುವಾರಿ ಸಚಿವರಿಂದ ನಗರ ಪ್ರದಕ್ಷಿಣೆ: ಜಿಲ್ಲಾಸ್ಪತ್ರೆ, ಲಸಿಕೆ ಕೇಂದ್ರ, ಭೇಟಿ, ಪರಿಶೀಲನೆ

ದಾವಣಗೆರೆ: ಚಿಗಟೇರಿ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಸೇವಾ ಭಾರತಿ ಟ್ರಸ್ಟ್ ಅಡಿಯಲ್ಲಿ ಕೋವಿಡ್ ರೋಗಿಗಳನ್ನು ನೋಡಿಕೊಳ್ಳುವ ಅಟೆಂಡರ್ಸ್ ಗಳನ್ನು ಭೇಟಿ ಮಾಡಿದ ಸಚಿವರು ತಮಗೆ ಬೇಕಾದ ಅಗತ್ಯ ಸವಲತ್ತುಗಳು ಸಿಗುತ್ತಿದೆಯೇ ಎಂದು ಮಾಹಿತಿ ಕೇಳಿ, ಖಚಿತ ಪಡಿಸಿಕೊಂಡರು.

ಲಸಿಕೆ ಫಲಾನುಭವಿಗಳ ಕುಶಲೋಪರಿ ವಿಚಾರಿಸಿದ ಸಚಿವರು, ಸಂಸದರು:
ನಗರದ ನಿಟ್ಟುವಳ್ಳಿಯ ಕೋವಿಡ್ ಲಸಿಕಾ ಕೇಂದ್ರಕ್ಕೆ ಮಂಗಳವಾರ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ, ಸಂಸದ ಜಿ.ಎಂ. ಸಿದ್ದೇಶ್ವರ ಸೇರಿದಂತೆ, ಜಿಲ್ಲಾಧಿಕಾರಿಗಳು ಹಾಗೂ ಅಧಿಕಾರಿಗಳ ತಂಡ ಕೋವಿಡ್ ಲಸಿಕೆ ಫಲಾನುಭವಿಗಳ ಕುಶಲೋಪರಿ ವಿಚಾರಿಸಿದರು.

ತರಳಬಾಳು ಸೇವಾ ಸಮಿತಿ ಕೇಂದ್ರಕ್ಕೆ ಸಚಿವರ ಭೇಟಿ:
ತರಳಬಾಳು ಸೇವಾ ಸಮಿತಿಗೆ ಭೇಟಿ ನೀಡಿ ಅಲ್ಲಿಯ ಅಡುಗೆ ಮನೆ ಹಾಗೂ ತಯಾರಿಸಲಾಗುತ್ತಿದ್ದ ಆಹಾರವನ್ನು ಪರಿಶೀಲಿಸಿದ ಸಚಿವರು, ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ತರಳಬಾಳು ಜಗದ್ಗುರುಗಳವರ ಕೊಡುಗೆ ಸಾಕಷ್ಟಿದೆ. ಅವರ ಸೇವೆ ಜನಮಾನಸದಲ್ಲಿ ಉಳಿಯುವಂತಹದ್ದು. ಜಗದ್ಗುರುಗಳ ಮಾರ್ಗದರ್ಶನದಂತೆ ತರಳಬಾಳು ಸೇವಾ ಸಮಿತಿ ಹಾಗೂ ಶಿವಸೈನ್ಯ ಯುವಕ ಸಂಘದ ಸದಸ್ಯರುಗಳು ಚಿಗಟೇರಿ ಜಿಲ್ಲಾಸ್ಪತ್ರೆಯ ರೋಗಿಗಳಿಗೆ ಹಾಗೂ

ಆಸ್ಪತ್ರೆಯ ಕೊರೊನಾ ರೋಗಿಗಳಿಗೆ ಪ್ರತಿ ದಿನ ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ ಗುಣಮಟ್ಟದ ಉಪಹಾರ ವ್ಯವಸ್ಥೆಯನ್ನು ಕಲ್ಪಿಸಿ, ರೋಗಿಗಳಿಗೆ ಮನೋಸ್ಥೈರ್ಯ ತುಂಬುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದರು.

 

ಈ ಸಂದರ್ಭದಲ್ಲಿ ಸಂಸದರಾದ ಡಾ.ಜಿ.ಎಂ.ಸಿದ್ದೇಶ್ವರ್, ಹೊನ್ನಾಳಿ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಮಹಾಪೌರ ಎಸ್.ಟಿ. ವೀರೇಶ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಸಿಇಒ ಡಾ. ವಿಜಯಮಹಾಂತೇಶ್, ಡಿಹೆಚ್‍ಒ ಡಾ.ನಾಗರಾಜ್, ಮಹಾನಗರಪಾಲಿಕೆ ಆಯುಕ್ತರು ವಿಶ್ವನಾಥ್ ಪಿ.ಮುದಜ್ಜಿ, ತಹಶೀಲ್ದಾರ್ ಗಿರೀಶ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!