ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರ ಜಿಲ್ಲಾ ಪ್ರವಾಸ

ಬಸವರಾಜ ಬೊಮ್ಮಯಿ
ದಾವಣಗೆರೆ : ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 9 ರಂದು ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ರಾಜನಹಳ್ಳಿ ಆಗಮಿಸಿ ಶ್ರೀ ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಲಿದ್ದಾರೆ
ಫೆಬ್ರವರಿ 09 ರಂದು ಮಧ್ಯಾಹ್ನ 12.30 ಗಂಟೆಗೆ ಬೆಂಗಳೂರು ಹೆಲಿ ಪ್ಯಾಡ್ ನಿಂದ ಪ್ರಯಾಣ ಬೆಳಿಸಿ ಮಧ್ಯಾಹ್ನ 1.50 ಕ್ಕೆ ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಹೆಲಿಪ್ಯಾಡ್‍ಗೆ ಆಗಮಿಸಿ ಶ್ರೀ ಗುರುಪೀಠದ ವತಿಯಿಂದ ಆಯೋಜಿಸಿರುವ 2023 ನೇ ಮಹರ್ಷಿ ವಾಲ್ಮೀಕಿ ಜಾತ್ರೆ ಮಹೋತ್ಸವ ಹಾಗೂ ಜನಜಾಗೃತಿ ಜಾತ್ರಾ ಮಹೋತ್ಸವದ ಉದ್ಘಾಟನೆಯಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 3.30ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.