ಸಿಎಂ ರಾಜಕೀಯ ಕಾರ್ಯದರ್ಶಿಯವರ ಜಿಲ್ಲಾ ಪ್ರವಾಸ 

ದಾವಣಗೆರೆ : ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿಯ ಶಾಸಕರಾದ ಎಂ.ಪಿ.ರೇಣುಕಾಚಾರ್ಯ ಇವರು ಜೂನ್-2022ರ ಮಾಹೆಯಲ್ಲಿ ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಜೂ.18 ರಂದು ಸುರೆಹೊನ್ನೆ ಗ್ರಾಮದ ಶಾಂತಿ ನಗರದಲ್ಲಿ ಶಾಲಾ ಕಾಂಪೌಂಡ್ ಮತ್ತು ಬಾಕ್ಸ್ ಚರಂಡಿ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ನೆರೆವೇರಿಸುವರು. ಸಂ.6.30 ಕ್ಕೆ ಕ್ಯಾಸಿನಕೆರೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ರಾ.11ಕ್ಕೆ ಹೊನ್ನಾಳಿಗೆ ಪ್ರಯಾಣ ಮತ್ತು ವಾಸ್ತವ್ಯ ಮಾಡುವರು.

ಜೂ.19 ರಂದು ಬೆ.11ಕ್ಕೆ ಹೊನ್ನಾಳಿ ತಾಲ್ಲೂಕಿನ ಕ್ಯಾಸಿನಕೆರೆ ಗ್ರಾಮದಲ್ಲಿ ನಡೆಯುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮ.2ಕ್ಕೆ ನ್ಯಾಮತಿ ತಾಲ್ಲೂಕಿನ ಗೋವಿನಕೋವಿ ಗ್ರಾಮದಲ್ಲಿ ನಡೆಯುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂ.4.30ಕ್ಕೆ ಹೊನ್ನಾಳಿಗೆ ಪ್ರಯಾಣ ಮತ್ತು ಹೊನ್ನಾಳಿಯಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲುಗಳನ್ನು ಸ್ವೀಕರಿಸುವರು. ಸಂ.6ಕ್ಕೆ ಗೋವಿನಕೋವಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ರಾ.11ಕ್ಕೆ ಹೊನ್ನಾಳಿಗೆ ಪ್ರಯಾಣ ಮತ್ತು ವಾಸ್ತವ್ಯ ಮಾಡುವರು.

ಜೂ.20 ರಂದು ಬೆ.11ಕ್ಕೆ ಹೊನ್ನಾಳಿ ತಾಲ್ಲೂಕಿನ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸುವರು. ಮ.1.30 ಕ್ಕೆ ಸರ್ಕಾರಿ ಕೈಗಾರಿಕಾ ಸಂಸ್ಥೆಗಳಲ್ಲಿ ಶಿಲಾಫಲಕ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಸಂ.4.15ಕ್ಕೆ ಕುಳಗಟ್ಟೆ ಹಾಗೂ ಹನಗವಾಡಿ ಗ್ರಾಮದಲ್ಲಿ ಸಿ.ಸಿ ರಸ್ತೆ ಉದ್ಘಾಟನೆ ನೆರವೇರಿಸುವರು. ಸಂ.5.45ಕ್ಕೆ ಲಿಂಗಾಪುರ ಗ್ರಾಮದಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕ, ಗ್ರಾಮ ಪಂಚಾಯತಿಯ ಮೊದಲನೇ ಮಹಡಿಯ ಕಟ್ಟಡ ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ ನೆರವೇರಿಸುವರು. ರಾ.7ಕ್ಕೆ ಹೊನ್ನಾಳಿಗೆ ಪ್ರಯಾಣ ಮತ್ತು ವಾಸ್ತವ್ಯ ಮಾಡುವರು.

ಜೂ.21 ರಂದು ಬೆ.6ಕ್ಕೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬೆ.10.15ಕ್ಕೆ ಕೊನ್ನಾಯಕನಹಳ್ಳಿ, ಹಾಗೂ ಬಳ್ಳೇಶ್ವರ ಗ್ರಾಮದಲ್ಲಿ ಹೊಳೆಮೆಟ್ಟಿಲು ಮತ್ತು ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳ ಉದ್ಘಾಟನೆ ನೆರವೇರಿಸುವರು. ಬೆ.11.45ಕ್ಕೆ ಸೋಮನಮಲ್ಲಾಪುರ ಗ್ರಾಮದಲ್ಲಿ ಕೆರೆ ಏರಿ ಮತ್ತು ರಿವಿಟ್‍ಮೇಂಟ್ ಕಾಮಗಾರಿ ಉದ್ಘಾಟನೆ ನೆರವೇರಿಸುವರು. ಮ.12.15ಕ್ಕೆ ದೇವನಾಯಕನಹಳ್ಳಿ ಗ್ರಾಮದಲ್ಲಿ ಹೊಳೆಮೆಟ್ಟಿಲು ಕಾಮಗಾರಿಗಳ ಉದ್ಘಾಟನೆ ನೆರವೇರಿಸುವರು. ಮ.12.45ಕ್ಕೆ ಹಳೆಗೊಲ್ಲರಹಳ್ಳಿ, ಅರಕೆರೆ, ಹಾಗೂ ನರಸಗೊಂಡನಹಳ್ಳಿ ಗ್ರಾಮದಲ್ಲಿ ಸಿ.ಸಿ ರಸ್ತೆ ಉದ್ಘಾಟನೆ ನೆರವೇರಿಸುವರು. ಮ.3ಕ್ಕೆ ಹೊನ್ನಾಳಿಗೆ ಪ್ರಯಾಣ ಬೆಳೆಸುವರು.

garudavoice21@gmail.com 9740365719

Leave a Reply

Your email address will not be published. Required fields are marked *

error: Content is protected !!